ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾಯಿಸದಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಬೈಂದೂರು; ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ತಪ್ಪಬಾರದೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಬೈಂದೂರಿನ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಸಾರ್ವಜನಿಕರ ಸಮಸ್ಯೆ ಆಲಿಸಲು ಸ್ಥಳಕ್ಕಾಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ್ ಮಾತನಾಡಿ, ಸಾರ್ವಜನಿಕರ ಬೇಡಿಕೆಯಂತೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಸವಲತ್ತುಗಳನ್ನು ಕಡಿತಗೊಳಿಸುವುದಿಲ್ಲ. ಶೀಘ್ರವೇ ಬೈಂದೂರಿಗೆ ತಾಲೂಕು ಆಸ್ಪತ್ರೆ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ದೀಪಕ್ ಕುವಾರ್ ಶೆಟ್ಟಿ ಪ್ರತಿಭಟನೆ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಡ ಜನರಿಗೆ ಸಮರ್ಪಕ ಸೇವೆ ದೊರೆಯುತ್ತಿಲ್ಲ. ಸಣ್ಣಪುಟ್ಟ ಕಾಯಿಲೆ, ಹೆರಿಗೆಗೆ ಖಾಸಗಿ ಆಸ್ಪತ್ರೆಗೆ ಹೋಗಲು ಸೂಚಿಸುತ್ತಾರೆ. ಈ ಮಧ್ಯೆ ಇಲಾಖೆಯು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ಹಿಂಪಡೆದು ತಜ್ಞ ವೈದ್ಯರನ್ನು ವರ್ಗಾಯಿಸಿದರೆ ಇನ್ನಷ್ಟು ಸಮಸ್ಯೆಯಾಗಲಿದೆ ಎಂದರು.
ಅರುಣ್ ಕುವಾರ್ ಶಿರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇವಾನಂದ, ರೈತ ಸಂದ ಪದಾಧಿಕಾರಿಗಳು ಹಾಜರಿದ್ದರು.