* ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಮಣಿಪಾಲ
* ಕೆಲವೇ ಸೀಟ್ಗಳು ಬಾಕಿ
ಉಡುಪಿ: ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜ್ ಮಣಿಪಾಲದಲ್ಲಿ 2026-27ನೇ ಸಾಲಿನ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆ ಮುಂದುವರಿದಿದ್ದು, ವಿವಿಧ ಕೋರ್ಸ್ಗಳಿಗೆ ಕೆಲವೇ ಸೀಟ್ಗಳು ಬಾಕಿ ಉಳಿದಿವೆ.
ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗಳಾದ ಅಟೋಮೊಬೈಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಬಿಗ್ ಡೇಟಾ, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್, ಮೆಕಾಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಪ್ರಿಂಟಿಂಗ್ ತಂತ್ರಜ್ಞಾನ ವಿಭಾಗಗಳಲ್ಲಿ ಕೆಲವೇ ಸೀಟ್ ಉಳಿದಿವೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಅಥವಾ ಐಟಿಐ ಉತ್ತೀರ್ಣರಾದ ವಿದ್ಯಾರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ದ್ವಿತೀಯ ವರ್ಷದ ಡಿಪ್ಲೊಮಾ ಪ್ರವೇಶ ಪಡೆಯಬಹುದು. ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳೂ ಸಹ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶ ಪಡೆಯಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹಾಗೂ ಮಕ್ಕಳಿ ಈ ಕೋರ್ಸ್ ಕಲಿಸಲು ಆಸಕ್ತರಿರುವ ಪಾಲಕರು ಮಾಹಿತಿಗಾಗಿ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಮಣಿಪಾಲ ಸಂಪರ್ಕಿಸಬಹುದು. ಮಾಹಿತಿಗಾಗಿ ಮೊ.ಸಂ. 9844729291, 9480575730 ಹಾಗೂ 9480732223 ಸಂಪರ್ಕಿಸಬಹುದು.