ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಪರಿಕರ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಪ್ರಮುಖರಾದ ಆನಂದ್ ಸಿ.ಕುಂದರ್, ಸಂಪತ್ ಕುಮಾರ್ ಶೆಟ್ಟಿ, ದಿನೇಶ್ ಗಾಣಿಗ, ಲಲಿತಾ ಪೂಜಾರಿ ಉಪಸ್ಥಿತರಿದ್ದರು.  
ಉಡುಪಿ

ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ ಶ್ಲಾಘನೀಯ

ಇಂದಿರಾ ಎನ್ ಕೆ
ಕೋಟ: ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಹೇಳಿದರು.
ಕೋಟದಲ್ಲಿ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ನಟ ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಗುರುವಾರ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಸ್ತಾಂತರಿಸಿದರು. ಪಂಚವರ್ಣ ಸಂಘಟನೆ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.
ಮಹೇಶ್ ಬೆಳಗಾವಿ ಸ್ವಾಗತಿಸಿದರು. ರವೀಂದ್ರ ಕೋಟ ಪ್ರಸ್ತಾವನೆಗೈದರು. ಕಲಾವತಿ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ವಸಂತಿ ಹಂದಟ್ಟು ಶೈಕ್ಷಣಿಕ ಪರಿಕರ ಪತ್ರ ವಾಚಿಸಿದರು.