ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡ ಅಕ್ಷತ್ ಪೈ.
* ರಾಜ್ಯ ಸಮಿತಿಯಿಂದ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯ ವರ್ಧನೆ ಹಾಗೂ ರಾಜ್ಯಾದ್ಯಂತ ಸಂಘಟನೆ ಸಕ್ರಿಯಗೊಳಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮಿತಿಗೆ ಹೊಸ ನೇಮಕಾತಿ ಮಾಡಲಾಗಿದೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೂ ನೇಮಕಾತಿ ಮಾಡಲಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕಗೊಂಡಿದ್ದಾರೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅನುಮೋದನೆ ನೀಡಿದ್ದು, ಅಕ್ಷತ್ ಪೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.