ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ಲೋಕಾರ್ಪಣೆಗೊಂಡ ಘನ ತ್ಯಾಜ್ಯ ಘಟಕ ವಿರೋಧಿಸಿ ಶುಕ್ರವಾರ ಅಹೋರಾತ್ರಿ ಧರಣಿ ನಡೆಯಿತು. 
ಉಡುಪಿ

ಘನ ತ್ಯಾಜ್ಯ ಘಟಕ ವಿರೋಧಿಸಿ ಅಹೋರಾತ್ರಿ ಧರಣಿ

ಇಂದಿರಾ ಎನ್ ಕೆ
ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯ ಘನ ತ್ಯಾಜ್ಯ ಘಟಕದ ಉದ್ಘಾಟನೆ ವಿರೋಧಿಸಿ ಸ್ಥಳೀಯರು ಕಪ್ಪು ಪಟ್ಟಿ ಧರಿಸಿ ಘಟಕದ ಸಮೀಪ ಪ್ರತಿಭಟನೆ ನಡೆಸಿದರು.
ಘಟಕದಿಂದ ಸ್ಥಳೀಯರಿಗೆ ಸಮಸ್ಯೆಯಾಗಲಿದ್ದು ಪರಿಸರಕ್ಕೆ ಹಾನಿಯಾಗಲಿದೆ ಹಾಗೂ ಸಿಆರ್‌ಜಡ್ ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಸ್ಥಳೀಯರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಉದ್ಘಾಟನೆ ನಡೆಸಿರುವುದು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಪಂ ವಿರುದ್ಧ ತೀರ್ಪು ಬಂದರೆ ಅಧಿಕಾರಿಗಳು, ಇಂದಿನ ಜನಪ್ರತಿನಿಧಿಗಳು ನೇರ ಹೊಣೆಯಾಗುತ್ತಾರೆ ಎಂದು ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಎಚ್ಚರಿಕೆ ನೀಡಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಪಂ ಸದಸ್ಯ ಶ್ರೀನಿವಾಸ್ ಅಮೀನ್, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕ ಅಧ್ಯಕ್ಷ ತಿಮ್ಮ ಪೂಜಾರಿ, ದಿನೇಶ್ ಗಾಣಿಗ ಕೋಟ, ಸ್ಥಳೀಯ ಹೋರಾಟಗಾರರಾದ ಮಹೇಶ್ ಪೂಜಾರಿ, ಸಂತೋಷ್ ಪೂಜಾರಿ, ಅಶೋಕ್ ಪೂಜಾರಿ, ನಾಗರಾಜ್, ಗಣೇಶ್ ಮೊದಲಾದವರು ಭಾಗಿಯಾದರು.