ಆಳ್ವಾಸ್‌ನಲ್ಲಿ ಉಮಂಗ್ ಸ್ಪರ್ಧೆಯ ಉದ್ಘಾಟನಾ ಸಮಾರಂಭದದಲ್ಲಿ ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ.ಪಿ.ಬಾಲಮುರಗನ್ ಅವರನ್ನು ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಗೌರವಿಸಿದರು. 
ಉಡುಪಿ

ಫೆಸ್ಟ್‌ಗಳಿಂದ ಸರ್ವೋತೋಮುಖ ಬೆಳವಣಿಗೆ

ಇಂದಿರಾ ಎನ್ ಕೆ
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಅಂತರ್ ಕಾಲೇಜು ಫೆಸ್ಟ್‌ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ. ಪಠ್ಯಪುಸ್ತಕದ ಜ್ಞಾನದ ಜತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಂವಹನ ಕೌಶಲಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ.ಪಿ.ಬಾಲಮುರಗನ್ ಹೇಳಿದರು.
ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗ ಕುವೆಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಉಮಂಗ್-2026ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಅಧ್ಯಕ್ಷತೆ ವಹಿಸಿ, ಪ್ರತಿ ಭಾಷೆಯೂ ತನ್ನದೇ ಆದ ಸಾಂಸ್ಕೃತಿಕ ವಿಭಿನ್ನತೆಯನ್ನು ಹೊಂದಿದೆ. ಒಂದು ಭಾಷೆಯನ್ನು ಕಲಿಯುವುದರಿಂದ ಮತ್ತೊಂದು ಭಾಷೆ ಹಿಂದುಳಿಯದು, ಬದಲಿಗೆ ನಮ್ಮ ಜ್ಞಾನ ವಿಸ್ತಾರವಾಗುತ್ತದೆ ಎಂದರು.
ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ನಾರಾಯಣ್ ಶೆಟ್ಟಿ ಮಾತನಾಡಿದರು. ಉಡುಪಿಯ ಪೂರ್ಣಪ್ರಜ್ಞಾ ಕಾಲೇಜು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆಯಿತು.
ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಮೂಡುಬಿದಿರೆ ಶಾಖೆಯ ಹಿರಿಯ ವ್ಯವಸ್ಥಾಪಕ ಪ್ರಭು ಕಮಾರ್, ವಿಭಾಗದ ಮುಖ್ಯಸ್ಥ ಡಾ.ದತ್ತಾತ್ರೇಯ ಹೆಗಡೆ, ವಿದ್ಯಾರ್ಥಿ ಸಂಯೋಜಕರಾದ ಲಿಖಿತ್, ದಿಶಾ ಕೋಟ್ಯಾನ್ ಉಪಸ್ಥಿತರಿದ್ದರು. ವಿನೆಟ್ ವಾಸ್ ನಿರೂಪಿಸಿದರು.