ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ರತೀಶ್ ಮುರಳೀಧರನ್, ವಿವೇಕ್ ಆಳ್ವ, ಮನೋಜ್ ಬಿ.ಶೆಟ್ಟಿ ಮೊದಲಾದವರಿದ್ದರು. 
ಉಡುಪಿ

ಐಬಿಎಂ ಎಐ ಲ್ಯಾಬ್ ಸ್ಥಾಪಿಸಿ ಆಳ್ವಾಸ್ ಮೈಲಿಗಲ್ಲು

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು.
ಐಬಿಎಂ ಇಂಡಿಯಾದ ವಾಟ್ಸನ್‌ಎಕ್ಸ್ ಎಐ ವಿಭಾಗದ ಕಾರ್ಯಕ್ರಮ ನಿರ್ದೇಶಕ, ಮುಖ್ಯಸ್ಥ ರತೀಶ್ ಮುರಳೀಧರನ್ ಮಾತನಾಡಿ, ದೇಶದ ಮೊದಲ ಐಬಿಎಂ ಎಐ ಲ್ಯಾಬ್ ಸ್ಥಾಪಿಸಿದ ಇಂಜಿನಿಯರಿಂಗ್ ಕಾಲೇಜಾಗಿ ಆಳ್ವಾಸ್ ಹೊಸ ಮೈಲಿಗಲ್ಲು ನಿರ್ಮಿಸಿದೆ. ಎಐ ತಂತ್ರಜ್ಞಾನವು ಜ್ಞಾನವನ್ನು ಎಲ್ಲರಿಗೂ ಸುಲಭವಾಗಿ ತಲುಪಿಸುವ ಶಕ್ತಿಯುತ ಸಾಧನವಾಗಿದೆ. ಆದರೆ ಭವಿಷ್ಯದ ಯಶಸ್ಸು ಕೇವಲ ತಂತ್ರಜ್ಞಾನದಿಂದ ನಿರ್ಧಾರವಾಗುವುದಿಲ್ಲ. ಕಲಿಯುವ ಆಸಕ್ತಿ, ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯ, ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ಕಂಡುಹಿಡಿಯುವ ಮನೋಭಾವವೂ ಅಷ್ಟೇ ಮುಖ್ಯ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಎಐಇಟಿಯ ಹಿರಿಯ ವಿದ್ಯಾರ್ಥಿ, ಐಬಿಎಂ ಇಂಡಿಯಾದ ಎಐ ತಜ್ಞ ಮನೋಜ್ ಬಿ.ಶೆಟ್ಟಿ ವಿದ್ಯಾರ್ಥಿಗಳಿಗೆ ಎಐ ಕ್ಷೇತ್ರದಲ್ಲಿರುವ ಅವಕಾಶಗಳು, ತಂತ್ರಜ್ಞಾನ ಬೆಳವಣಿಗೆ ಕುರಿತು ಮಾರ್ಗದರ್ಶನ ನೀಡಿದರು.
ಎಐಇಟಿ ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡಿಸ್, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಪ್ರತಿನಿಧಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೊಠಾರಿ ಸ್ವಾಗತಿಸಿದರು. ರಕ್ಷಿತಾ ರೈ ನಿರೂಪಿಸಿದರು. ಸಂಪತ್ ಶೆಟ್ಟಿ ವಂದಿಸಿದರು.