ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ತಾಲೂಕು ನೂತನ ಕಚೇರಿಯನ್ನು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ನಾಗೇಶ ನಾಯ್ಕ, ಅಂಪಾರು ದಿನಕರ ಶೆಟ್ಟಿ, ಡಾ.ಪ್ರೇಮಾನಂದ, ಡಾ.ನಾಗೇಶ, ಡಾ.ರಾಜೇಶ್, ಬಿ.ಎಸ್.ಸುರೇಶ ಶೆಟ್ಟಿ ಮತ್ತಿತರರು ಇದ್ದರು.
- ಕೆ.ಗೋಪಾಲ ಪೂಜಾರಿ ಹೇಳಿಕೆ
- ನೂತನ ಕಚೇರಿ ಉದ್ಘಾಟನೆ
- ಪ್ರತಿಭಾ ಪುರಸ್ಕಾರ ವಿತರಣೆ
ವಿಜಯವಾಣಿ ಸುದ್ದಿಜಾಲ ಬೈಂದೂರು
ಸರ್ಕಾರಿ ನೌಕರರ ಸಂಘಟನೆ ಎಂದರೆ ಅದೊಂದು ಚಿಂತಕರ ಚಾವಡಿ ಇದ್ದಂತೆ. ಇಂತಹ ಚಿಂತಕರ ಸೇವೆಗಳು ಸದಾ ಕಾಲ ಸಮಾಜಕ್ಕೆ ದೊರಕುವಂತಾಗಬೇಕು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂದ ನೌಕರರು ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕ ಪ್ರಯತ್ನದ ಜತೆಗೆ ತಮ್ಮ ಕರ್ತವ್ಯವನ್ನೂ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಬೈಂದೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿ, ಬಳಿಕ ರೋಟರಿ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ, ನೌಕರರ ಸಂದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ, ಡಾ.ನಾಗೇಶ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್, ಸಿದ್ದಾಪುರ ಜ್ಞಾನ ಸರಸ್ವತಿ ವಿದ್ಯಾಕೇಂದ್ರದ ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ ಉಪ್ಪುಂದ, ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಜಿಪಂ ಮಾಜಿ ಸದಸ್ಯರಾದ ಮದನ್ ಕುಮಾರ್ ಉಪ್ಪುಂದ, ಗೌರಿ ದೇವಾಡಿಗ, ಬೈಂದೂರು ತಾಲೂಕು ರೈತ ಸಂದ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಕೆಡಿಪಿ ಸದಸ್ಯ ಶೇಖರ ಪೂಜಾರಿ, ಡಿಡಿಪಿಯು ಬಿ.ಟಿ.ಲೋಕೇಶ್, ಅಕ್ಷರ ದಾಸೋಹ ಸಮಿತಿ ಚಂದ್ರ ನಾಯ್ಕ, ಎಂಎಂ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ ಅರುಣ್ ಕುಮಾರ್ ಶಿರೂರು, ಕ.ರಾ.ನೌ.ಸಂದ ಗೌರವಾಧ್ಯಕ್ಷ ಶರೀಫ್, ಖಜಾಂಚಿ ಉದಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕ ಸುಧಾಕರ ದೇವಾಡಿಗ ಸ್ವಾಗತಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂದ ಅಧ್ಯಕ್ಷ ಶೇಖರ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ಸುಬ್ರಹ್ಮಣ್ಯ ಜಿ.ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಗಣಪತಿ ಹೋಬಳಿದಾರ್ ವಂದಿಸಿದರು. ಬಳಿಕ ಬೈಂದೂರು ಗಾಂಧಿ ಮೈದಾನದಲ್ಲಿ ತಾಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಿತು.