ಪೆರ್ಡೂರಿನಲ್ಲಿ ನಡೆದ ‘ಹಿರಿಯೆರೊಟ್ಟಿಗೊಂಜಿ ದಿನ’ ಕಾರ್ಯಕ್ರಮದಲ್ಲಿ ನಾಟಿ ವೈದ್ಯರಾದ ರಾಧಾ ಶೆಟ್ಟಿ ಹೋಳಿಂಜೆ, ಸುಂದರಿ ಆಚಾರ್ಯ ಬುಕ್ಕಿಗುಡ್ಡೆ ಅವರನ್ನು ಸನ್ಮಾನಿಸಲಾಯಿತು.
ಹೆಬ್ರಿ: ಇಂದಿನ ವಿಭಕ್ತ, ಆಧುನಿಕ ಕುಟುಂಬಗಳಲ್ಲಿ ವೃದ್ಧಾಪ್ಯ ಶಾಪವಾಗಿ ಪರಿಣಮಿಸಿದೆ. ಜೀವನ ನೀರಸವಾಗಿದ್ದು ಹೆಚ್ಚಿನವರು ಮನರಂಜನೆಯಿಂದ ವಂಚಿತರಾಗಿದ್ದಾರೆ. ಅಂತಹ ಹಿರಿಯರಿಗೆ ಜೀವನೋತ್ಸಾಹ ತುಂಬಲು ಇಂತಹ ಕಾರ್ಯಕ್ರಮಗಳು ಅತಿ ಅಗತ್ಯ ಎಂದು ಸಮಿತಿ ಗೌರವಾಧ್ಯಕ್ಷ ಶಾಂತಾರಾಮ ಸೂಡ ಹೇಳಿದರು.
ಪೆರ್ಡೂರು ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ‘ಹಿರಿಯೆರೊಟ್ಟಿಗೊಂಜಿ ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸವಾರೋಪ ಸವಾರಂಭದಲ್ಲಿ ಸಮಿತಿ ಅಧ್ಯಕ್ಷ ಸತೀಶ್ ಕೋಟ್ಯಾನ್ ವಾತನಾಡಿ, ತಂದೆ-ತಾಯಿಯನ್ನು ವೃದ್ಧಾಪ್ಯದಲ್ಲಿ ಮಕ್ಕಳಂತೆಯೇ ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯ 60 ರಿಂದ 96 ವರ್ಷದವರೆಗಿನ ನೂರಾರು ಹಿರಿಯ ನಾಗರಿಕರು ಪಾಲ್ಗೊಂಡು ಆಡಿ, ಹಾಡಿ, ನರ್ತಿಸಿ ಸಂಭ್ರಮಿಸಿದರು. ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿದ್ದ ರಾಧಾ ಶೆಟ್ಟಿ ಹೊಳಿಂಜೆ, ಸುಂದರಿ ಆಚಾರ್ಯ ಬುಕ್ಕಿಗುಡ್ಡೆ ಅವರನ್ನು ಸನ್ಮಾನಿಸಲಾಯಿತು.
ಸಮಿತಿ ಅಧ್ಯಕ್ಷ ಸತೀಶ್ ಕೋಟ್ಯಾನ್, ಪ್ರಮುಖರಾದ ನಿತ್ಯಾನಂದ ಭಟ್, ಕಾರ್ಯದರ್ಶಿ ರವೀಂದ್ರ ನಾಡಿಗ್, ಜತೆ ಕಾರ್ಯದರ್ಶಿ ಸತೀಶ್ ಕುಲಾಲ್ ಉಪಸ್ಥಿತರಿದ್ದರು.
ಪ್ರತಿಕ್ಷಾ ಕೋಟ್ಯಾನ್ ಪ್ರಾರ್ಥಿಸಿದರು. ಉಪೇಂದ್ರ ಆಚಾರ್ಯ ನಿರೂಪಿಸಿದರು. ಪ್ರಭಾಕರ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿ, ವಂದಿಸಿದರು.