ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಧನಂಜಯ ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಎ.ಕಿರಣ್‌ಕುಮಾರ್ ಕೊಡ್ಗಿ, ಬಿ.ಗಣೇಶ ಕಿಣಿ ಬೆಳ್ವೆ, ಬಿ.ಸತೀಶ್ ಕಿಣಿ ಬೆಳ್ವೆ, ವಿಲಾಸ್ ಹೆಗ್ಡೆ, ಎಚ್.ಸುರೇಶ ಶೆಟ್ಟಿ ಬೆಳ್ವೆ, ಎಸ್.ಚಂದ್ರಶೇಖರ ಶೆಟ್ಟಿ ಸುರ‌್ಗೋಳಿ, ಲೋಕೇಶ್ ಸಿ., ಡಾ.ಅಶೋಕ ಕಾಮತ್ ಉಪಸ್ಥಿತರಿದ್ದರು.  
ಉಡುಪಿ

ಪ್ರತಿಭೆಗಳಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ಅವಕಾಶ

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಬೆಳ್ವೆ

ಸರ್ಕಾರಿ ಶಾಲೆಗಳಲ್ಲಿ ಹಮ್ಮಿಕೊಳ್ಳುವ ಕ್ರೀಡಾಕೂಟಗಳ ಮೂಲಕ ಸಾಮಾನ್ಯ ಕುಟುಂಬದ ಕ್ರೀಡಾ ಪ್ರತಿಭೆಗಳಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶವಾಗಲಿದೆ. ಜತೆಗೆ ದೇಶವನ್ನು ಪ್ರತಿನಿಧಿಸಿ ಕೀರ್ತಿಯನ್ನು ಹೆಚ್ಚಿಸಿಕೊಳ್ಳಲು ಸೂಕ್ತ ವೇದಿಕೆಯಾಗಲಿದೆ ಎಂದು ಉದ್ಯಮಿ ಬಿ.ಗಣೇಶ ಕಿಣಿ ಬೆಳ್ವೆ ಹೇಳಿದರು.

ಬೆಳ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕುಂದಾಪುರ ವಲಯದ ಸಹಯೋಗದಲ್ಲಿ ದಿ.ಬೆಳ್ವೆ ಪಟೇಲ್ ತೇಜಪ್ಪ ಶೆಟ್ಟಿ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ಮೈಸೂರು ವಿಭಾಗಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಳ ಆನುವಂಶಿಕ ಆಡಳಿತ ಮೊಕ್ತೇಸರ ಧನಂಜಯ ಶೆಟ್ಟಿ ಪಂದ್ಯಾಟ ಉದ್ಘಾಟಿಸಿದರು. ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.

ಬ್ರಹ್ಮಾವರ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ, ಹೊಸ್ಟ್ ಇಂಡಿಯಾ ಈವೇಂಟ್ಸ್ ಹಾಗೂ ಮಾರ್ಕೆಟಿಂಗ್ ಬೆಂಗಳೂರು ನಿರ್ದೇಶಕ ವಿಲಾಸ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕ ಎಚ್.ಸುರೇಶ ಶೆಟ್ಟಿ ಬೆಳ್ವೆ, ಬೆಳ್ವೆ ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಚಂದ್ರಶೇಖರ ಶೆಟ್ಟಿ ಸುರ‌್ಗೋಳಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಲೋಕೇಶ್ ಸಿ., ಡಾ.ಅಶೋಕ ಕಾಮತ್, ಕುಂದಾಪುರ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಂತಕುಮಾರ ಬೆಳ್ವೆ, ಮುಖ್ಯ ಶಿಕ್ಷಕಿ ಜಯಶ್ರೀ ಶೆಟ್ಟಿಗಾರ್, ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ರವಿಚಂದ್ರ ಕಾರಂತ ಪ್ರಾಸ್ತಾವಿಕ ಮಾತನಾಡಿದರು. ಕಿಶನ್‌ರಾಜ್ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಡಾ.ಅಶೋಕ ಕಾಮತ್ ವಂದಿಸಿದರು.

ಮೆರವಣಿಗೆ

ಬೆಳ್ವೆಯಲ್ಲಿ ಕ್ರೀಡಾ ತಂಡಗಳಿಂದ ಮೆರವಣಿಗೆ, ಯಕ್ಷ ನೃತ್ಯದ ಸ್ವಾಗತದೊಂದಿಗೆ ಗಣ್ಯರು, ದಾನಿಗಳು, 8 ಜಿಲ್ಲೆಗಳ 32 ತಂಡಗಳ 450 ಕ್ರೀಡಾಪಟುಗಳು, ವ್ಯವಸ್ಥಾಪಕರು, ತರಬೇತುದಾರರು, ವಿದ್ಯಾಭಿಮಾನಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಪದಾಧಿಕಾರಿಗಳು, ಶಿಕ್ಷಕರು, ಕ್ರೀಡಾಭಿಮಾನಿಗಳನ್ನು ಸ್ವಾಗತಿಸಲಾಯಿತು.