ಉಡುಪಿ ಮಲ್ಪೆಯ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವದ ನಿಮಿತ್ತ ಪವಿತ್ರ ಬಲಿಪೂಜೆ ಕಾರ್ಯಕ್ರಮ ನಡೆಯಿತು. ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ, ಡಾ.ಜೆರಾಲ್ಡ್ ಐಸಾಕ್ ಲೋಬೊ, ಡೆನಿಸ್ ಡೆಸಾ ಇತರರಿದ್ದರು.
* ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅಭಿಮತ
* ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ
ಉಡುಪಿ: ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ ಬಳಿಕ ಕಂಗಾಲಾಗಿದ್ದ ಅವರ ಶಿಷ್ಯರನ್ನು ಒಗ್ಗೂಡಿಸಿ ಒಂದಾಗಿಯೇ ಇರುವಂತೆ ಮೇರಿ ಮಾತೆ ಧೈರ್ಯ ತುಂಬಿದ್ದರು. ಅವರು ದೇವರ ಆದೇಶವನ್ನು ಗೌರವಯುತವಾಗಿ ಪಾಲಿಸಿ ಯೇಸು ಸ್ವಾಮಿಯ ತಾಯಿಯಾದರು. ಮೇರಿ ಮಾತೆಯು ದೇವರ ವಾಕ್ಯದ ಮೇಲೆ ವಿಶ್ವಾಸವಿಟ್ಟ ದಿಟ್ಟೆಯಾಗಿದ್ದು, ಪವಿತ್ರ ಧರ್ಮಸಭೆಯಲ್ಲಿ ಆಕೆಗೆ ವಿಶೇಷ ಸ್ಥಾನ&ಮಾನ ನೀಡಿ ಗೌರವಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷ ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.
ಮಲ್ಪೆಯ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ಶನಿವಾರ (ಆ.) ಆಯೋಜಿಸಿದ್ದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪವಿತ್ರ ಬಲಿಪೂಜೆಯ ನೇತೃತ್ವ ವಹಿಸಿ ಸಂದೇಶ ನೀಡಿದರು.
ಮೇರಿ ಮಾತೆಯನ್ನು ಪವಿತ್ರ ಧರ್ಮಸಭೆಯ ತಾಯಿ ಎಂದು ಕರೆಯಲಾಗುತ್ತದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕೋಣ ಎಂದರು.
ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಅಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ವಲಯ ಪ್ರಧಾನ ಗುರು ಡೆನಿಸ್ ಡೆಸಾ, ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೂತನ ಆಧ್ಯಾತ್ಮಿಕ ನಿರ್ದೇಶಕ ಅನಿಲ್ ಡಿಸೋಜಾ, ಪುಣ್ಯಕ್ಷೇತ್ರದ ರೆಕ್ಟರ್ ಬ್ಯಾಪ್ಟಿಸ್ಟ್ ಮಿನೇಜಸ್, ವಿವಿಧ ಚರ್ಚ್ಗಳ ಗುರುಗಳು, ಚರ್ಚ್ನ ಪಾಲನಾ ಮಂಡಳಿ ಉಪಾಧ್ಯಕ್ಷ ನವೀನ್ ಫೆರ್ನಾಂಡಿಸ್, ಕಾರ್ಯದರ್ಶಿ ಪ್ರೆಸಿಲ್ಲಾ ಆಳ್ವಾ, ಆಯೋಗಗಳ ಸಂಯೋಜಕರಾದ ಡೆನಿಸ್ ಲಸ್ರಾದೊ ಹಾಗೂ ಚರ್ಚ್ನ ಮಹೋತ್ಸವ ಆಚರಣಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಮಹೋತ್ಸವದ ನಿಮಿುತ್ತ ಬೆಳಗ್ಗೆ 7:30ಕ್ಕೆ ಹಾಗೂ ಸಂಜೆ 4 ಗಂಟೆಗೆ ಕೊಂಕಣಿ ಭಾಷೆಯಲ್ಲಿ, ಮಧ್ಯಾಹ್ನ 2 ಗಂಟೆಗೆ ಕನ್ನಡ ಹಾಗೂ ಸಂಜೆ 6 ಗಂಟೆಗೆ ಇಂಗ್ಲಿಷ್ ಭಾಷೆಯಲ್ಲಿ ಇನ್ನಿತರ ಬಲಿಪೂಜೆಗಳನ್ನು ಆಯೋಜಿಸಲಾಗಿತ್ತು.