ಹೃದಯ ತಪಾಸಣಾ ಉಚಿತ ಶಿಬಿರವನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ ಉದ್ಘಾಟಿಸಿದರು. ಪ್ರಮುಖರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಜಗನ್ನಾಥ ಬಂಗೇರ ನಿರ್ಮಲ್, ರವಿರಾಜ ಶೆಟ್ಟಿ ಮೊದಲಾದವರು ಇದ್ದರು.  
ಉಡುಪಿ

ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ

ಇಂದಿರಾ ಎನ್ ಕೆ

ಬಂಟ್ವಾಳ: ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಹೃದಯ ರೋಗ ಸಹಿತ ಎಲ್ಲ ರೋಗಗಳಿಂದಲೂ ದೂರವಿರಲು ಸಾಧ್ಯವಿದೆ. ಮನುಷ್ಯನಿಗೆ ಆರೋಗ್ಯ ಅತಿ ಮುಖ್ಯವಾಗಿದ್ದು, ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಬೇಕು ಎಂದು ಎ.ಜೆ.ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಾಮನ ನಾಯಕ್ ಹೇಳಿದರು.

ಸ್ನೇಹ ಮಿಲನ ಕಲ್ಲಡ್ಕ ಮತ್ತು ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಕುಂಟಿಕಾನ ಮಂಗಳೂರು ಸಹಭಾಗಿತ್ವದಲ್ಲಿ ರೋಟರಿ ಕ್ಲಬ್ ಸಭಾಭವನದಲ್ಲಿ ಭಾನುವಾರ ಹೃದಯ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿದರು.
ಬಂಟ್ವಾಳ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಶಿಬಿರ ಉದ್ಘಾಟಿಸಿದರು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ದುರ್ಗಾ ಫೆಸಿಲಿಟಿ ಮ್ಯಾನೇಜ್‌ಮೆಂಟ್ ಸರ್ವೀಸಸ್ ಪ್ರೈ.ಲಿ. ಆಡಳಿತ ನಿರ್ದೇಶಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ನರಿಕೊಂಬು ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ರವಿರಾಜ ಶೆಟ್ಟಿ ಇದ್ದರು.
ಸ್ನೇಹ ಮಿಲನದ ಅಧ್ಯಕ್ಷ ರವೀಂದ್ರ ಸಪಲ್ಯ ಸ್ವಾಗತಿಸಿದರು. ಸದಸ್ಯ ಜಯಪ್ರಕಾಶ್ ರೈ ವಂದಿಸಿದರು, ಚಂದ್ರಹಾಸ ರೈ ನಿರೂಪಿಸಿದರು.