ಸುಳ್ಯದಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. 
ಉಡುಪಿ

ಸುಳ್ಯದಲ್ಲಿ ಮಾದಕ ವ್ಯಸನ ವಿರೋಧಿ ದಿನಾಚರಣೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸುಳ್ಯ ಪೊಲೀಸ್ ಠಾಣೆ, ಪ್ರೆಸ್ ಕ್ಲಬ್ ಸುಳ್ಯ, ಸರ್ಕಾರಿ ಪದವಿಪೂರ್ವ ಕಾಲೇಜು ಸುಳ್ಯ, ಸಂಕೇಶ್ ಫೌಂಡೇಷನ್ ಸುಳ್ಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಸುಳ್ಯದಲ್ಲಿ ನಡೆಯಿತು.
ನಗರದಲ್ಲಿ ಜಾಗೃತಿ ಜಾಥಾ ನಡೆಯಿತು. ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಥಾ ಗಾಂಧಿನಗರ ತನಕ ಸಾಗಿ ಅಲ್ಲಿಂದ ಹಿಂತಿರುಗಿ ಪೊಲೀಸ್ ಠಾಣೆಯಲ್ಲಿ ಸಮಾಪನಗೊಂಡಿತು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಪತ್ರಕರ್ತರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡರು.
ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಥಾಕ್ಕೆ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಸಂಕೇಶ್ ಫೌಂಡೇಷನ್‌ನ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಂಕೇಶ್, ಸುಳ್ಯ ಆರಕ್ಷಕ ಉಪನಿರೀಕ್ಷಕ ಸಂತೋಷ್ ಕುಮಾರ್ ಬಿ.ಪಿ., ಪ್ರೊಬೆಷನರಿ ಎಸ್‌ಐ ಕೃಷ್ಣ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ವರ್ತಕರ ಸಂಘದ ಗೌರವಾಧ್ಯಕ್ಷ ಸುಧಾಕರ ರೈ ಪಿ.ಬಿ., ಪ್ರಮುಖರಾದ ಎಂ.ಬಿ.ಸದಾಶಿವ, ಡಾ.ರಾಮ್ ಮೋಹನ್, ಲತಾ ಮಧುಸೂದನ್, ಲತಾಶ್ರೀ ಸುಪ್ರೀತ್ ಮೋಂಟಡ್ಕ, ತಾರಾ ಮಾಧವ, ನಾಗವೇಣಿ, ಮನಮೋಹನ ಬಳ್ಳಡ್ಕ,ಭಾಸ್ಕರ ರಾವ್, ಚಂದ್ರಶೇಖರ ಉದ್ದಂತ್ತಡ್ಕ, ಹರೀಶ್ ಬೂಡುಪನ್ನೆ, ದೇವಿಪ್ರಸಾದ್, ಇಬ್ರಾಹಿಂ, ಶಾರೀಖ್ ಡಿ.ಎಂ..ಪ್ರಭಾಕರನ್ ನಾಯರ್ ಸಿ.ಎಚ್, ಸತ್ಯಶಾಂತಿ ತ್ಯಾಗಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಹರೀಶ್ ಬಂಟ್ವಾಳ್ ಸ್ವಾಗತಿಸಿದರು.
ಸಮಾರೋಪ ಸಮಾರಂಭದಲ್ಲಿ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಎಸ್‌ಐ ಸಂತೋಷ್ ಕುಮಾರ್ ಬಿ.ಪಿ. ಮಾತನಾಡಿದರು. ಪ್ರೊಬೆಷನರಿ ಎಸ್‌ಐ ಕೃಷ್ಣ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಸ್ವಾಗತಿಸಿದರು. ಹಸೈನಾರ್ ಜಯನಗರ ವಂದಿಸಿದರು.