ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಉದ್ಘಾಟಿಸಿದರು,.
ಉಡುಪಿ: ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿಮೂರ್ಲನೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದರು.
ಬ್ರಹ್ಮಗಿರಿ ಬಾಲಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಆಧುನಿಕ ಯುಗದಲ್ಲಿ ವಂಚನೆಗಳು ಹೆಚ್ಚುತ್ತಿವೆ. ಜನರು ಹೆಚ್ಚು ವ್ಯಾಮೋಹಕ್ಕೆ ಒಳಗಾಗುತ್ತಿದ್ದಾರೆ. ತಂತ್ರಜ್ಞಾನಗಳ ಬಳಕೆ ಮತ್ತು ಹಣದ ಆಮಿಷಕ್ಕೆ ಬಲಿಯಾಗುತ್ತಿರುವುದು ಮುಖ್ಯ ಕಾರಣವಾಗಿದೆ ಎಂದರು.
ಮಹಿಳಾ ಪೊಲೀಸ್ ಠಾಣೆಯ ಪೋಲಿಸ್ ಉಪನಿರೀಕ್ಷಕ ರಾಘವೇಂದ್ರ ಸಿ. ಮಾತನಾಡಿದರು. ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ರತ್ನ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವಿಣ್ ಹೇರೂರ ಉಪಸ್ಥಿತರಿದ್ದರು. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ. ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಪ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಹೇರೂರ ವಂದಿಸಿದರು.