ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಸನ್ಮಾನ ನಡೆಯಿತು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್, ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ, ಸೌತ್ ಕೆನರಾ ಫೋಟೋಗ್ರಾರ್ಸ್ ಅಸೋಸಿಯೇಶನ್ ಅಧ್ಯಕ್ಷ ರಾಜೇಶ್ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು.  
ಉಡುಪಿ

ಅಬ್ಬಕ್ಕ ಉತ್ಸವಕ್ಕೆ 50 ಲಕ್ಷ ರೂ. ಅನುದಾನಕ್ಕೆ ಮನವಿ

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ 30 ವರ್ಷಗಳಿಂದ ನಡೆಯುತ್ತಿರುವ ಅಬ್ಬಕ್ಕ ಉತ್ತವಕ್ಕೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಒದಗಿಸುವಂತೆ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಬೇಡಿಕೆ ಸಲ್ಲಿಸಿದರು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ, ಸೌತ್ ಕೆನರಾ ಫೋಟೋಗ್ರಾರ್ ಅಸೋಸಿಯೇಶನ್ ಉಳ್ಳಾಲ ವಲಯ, ಪೆರ್ಮನ್ನೂರು ಲಯನ್ಸ್ ಕ್ಲಬ್ ಆಶ್ರಯದಲ್ಲಿ ಸೋಮವಾರ ಕುತ್ತಾರ್‌ನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಗೌರವ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆರು ವರ್ಷಗಳಿಂದ ಸರ್ಕಾರದ ಅನುದಾನ ಸಿಗದೆ ಉತ್ಸವ ನಡೆಸುವುದು ಕಷ್ಟಕರವಾಗಿದೆ. 30ನೇ ವರ್ಷಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಬ್ಬಕ್ಕಳ ಹೆಸರು ವಿಮಾನ ನಿಲ್ದಾಣ, ರೈಲು ನಿಲ್ದಾಣ ಅಥವಾ ರಸ್ತೆಗಿಡಬೇಕು. ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ವೃತ್ತ, ಕಂಚಿನ ಪ್ರತಿಮೆ ನಿರ್ಮಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಉದ್ಘಾಟಿಸಿದರು. ಸೌತ್ ಕೆನರಾ ಫೋಟೋಗ್ರಾರ್ಸ್ ಅಸೋಸಿಯೇಶನ್ ಅಧ್ಯಕ್ಷ ರಾಜೇಶ್ ಉಳ್ಳಾಲ್, ಪೆರ್ಮನ್ನೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಸಿಸಿಲಿಯಾ ಮೊಂತೇರೊ, ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಸದಸ್ಯ ಆನಂದ ಕೆ.ಅಸೈಗೋಳಿ, ಉಳ್ಳಾಲ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ದೇವಕಿ ಆರ್.ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮೀ ಗಟ್ಟಿ ಸ್ವಾಗತಿಸಿದರು.

ಅಬ್ಬಕ್ಕ ಉತ್ಸವ ಸಮಿತಿ ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲರೂ ಜತೆಯಾಗಿ ಕುಳಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಒಗ್ಗಟ್ಟು, ಪ್ರೀತಿ, ವಿಶ್ವಾಸದಿಂದ ಮುನ್ನಡೆಯುವುದು ಅನಿವಾರ್ಯ.