4 ಪಥದ ರಸ್ತೆ ನಿರ್ಮಿಸಲು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರಿಗೆ ಹೆಬ್ರಿ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಕುಚ್ಚೂರು ಮನವಿ ಸಲ್ಲಿಸಿದರು.
ಹೆಬ್ರಿ: ರಾಷ್ಟ್ರೀಯ ಹೆದ್ದಾರಿ 169ಎಯ ಹೆಬ್ರಿ ಕೇಳಪೇಟೆಯಿಂದ ಪೊಲೀಸ್ ಕ್ವಾರ್ಟರ್ಸ್ ತನಕ ಟ್ರಾಫಿಕ್‌ನಿಂದ ಮುಕ್ತಿ ಪಡೆಯಲು 4 ಪಥದ ರಸ್ತೆಯನ್ನು ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಶಿಫಾರಸು ಮಾಡಲು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳೆ ಅವರಿಗೆ ಹೆಬ್ರಿಯ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಕುಚ್ಚೂರು ಬುಧವಾರ ಮನವಿ ಮಾಡಿದರು.
ಹೆಬ್ರಿ ಸರ್ಕಲ್‌ನಲ್ಲಿ ದಿನನಿತ್ಯ ಚಾಲಕರಿಗೆ, ವಿದ್ಯಾರ್ಥಿಗಳಿಗೆ, ಪಾದಚಾರಿಗಳಿಗೆ ಟ್ರಾಫಿಕ್ ಜಾಮ್‌ನಿಂದ ಸಮಸ್ಯೆ ಉಂಟಾಗುತ್ತದೆ. ಆಂಬುಲೆನ್ಸ್‌ಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಬೃಹತ್ ಗಾತ್ರದ ವಾಹನಗಳು ಬಂದರೆ ಕೆಲಕಾಲ ರಸ್ತೆ ಬಂದ್ ಆಗುತ್ತದೆ. ಆದ್ದರಿಂದ ಇಲ್ಲಿಗೆ ನಾಲ್ಕು ಪಥದ ರಸ್ತೆ ಸೂಕ್ತವೆಂದು ಶ್ರೀಕಾಂತ್ ಪೂಜಾರಿ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಸ್ಥಳ ಪರಿಶೀಲನೆ ನಡೆಸಿ, ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರಿಗೆ ಶಿಫಾರಸು ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.