ಕಾರ್ಕಳ: ಸಾಮಾಜಿಕ ಜಾಲತಾಣ ಬಳಸಿಕೊಂಡು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಹಾಗೂ ಕೋಮು ಸೌಹಾರ್ದ ಕೆಡಿಸುವ ದುಷ್ಕೃತ್ಯಗಳಲ್ಲಿ ತೊಡಗಿದ್ದವರ ವಿರುದ್ಧ ಉಡುಪಿ ಮತ್ತು ಕಾರ್ಕಳ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪರಶುರಾಮ ಮೂರ್ತಿಯ ಚಿತ್ರಕ್ಕೆ ಸುನಿಲ್ ಕುಮಾರ್ ಮುಖ ಅಳವಡಿಸಿ ವೈರಲ್ ವಾಡಲಾಗಿತ್ತು. ಈ ಬಗ್ಗೆ ಸುಮಂತ್ ಶೆಟ್ಟಿಗಾರ್ ನೀಡಿದ ದೂರಿನ ಮೇರೆಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲ್ ಅವರ ಎಐ ಫೋಟೋ ಬಳಸಿ ಒಂದು ಕೋಮಿನ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.