ಬಂಟ್ವಾಳದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ ನಡೆಯಿತು. ಬಂಟ್ವಾಳ ಸಿಡಿಪಿಒ ಮಮ್ತಾಜ್, ಮಂಗಳೂರು ಸಿವಿಲ್ ಕಾಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಮಹಾಬಲ ಕೊಟ್ಟಾರಿ ಮೊದಲಾದವರಿದ್ದರು. 
ಉಡುಪಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಆಟಿಸಂ ಅರಿವು ಅಗತ್ಯ

ಇಂದಿರಾ ಎನ್ ಕೆ
ಬಂಟ್ವಾಳ: ಬೆಳೆಯುವ ಹಂತದಲ್ಲೇ ಮಕ್ಕಳಲ್ಲಿನ ಆಟಿಸಂ ಗುರುತಿಸುವಿಕೆ ಅಗತ್ಯವಾಗಿದ್ದು, ಇದು ಮುಂದಕ್ಕೂ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಬಗ್ಗೆ ಅರಿವು ಅಗತ್ಯ ಎಂದು ಬಂಟ್ವಾಳ ಸಿಡಿಪಿಒ ಮಮ್ತಾಜ್ ಹೇಳಿದರು.
ವಿಕಾಸಂ ಸೇವಾ ಫೌಂಡೇಶನ್ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದಲ್ಲಿ ಗುರುವಾರ ಲಯನ್ಸ್ ಸೇವಾ ಮಂದಿರದಲ್ಲಿ ವಿಶ್ವ ಆಟಿಸಂ ಜಾಗೃತಿ ದಿನಾಚರಣೆ, ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಂಗಳೂರು ಸಿವಿಲ್ ಕಾಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಮಹಾಬಲ ಕೊಟ್ಟಾರಿ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಎಂ.ರೋಹಿತಾಶ್ವ ಅಧ್ಯಕ್ಷತೆ ವಹಿಸಿದ್ದರು.
ಸಕ್ಷಮ ದ.ಕ. ಜಿಲ್ಲಾ ಕಾರ್ಯದರ್ಶಿ ಹರೀಶ್ ಪ್ರಭು, ಸಂಸ್ಕಾರ ಭಾರತಿ ದ.ಕ. ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಮಾಜಿ ಅಧ್ಯಕ್ಷ ನಾರಾಯಣ ಸಿ.ಪೆರ್ನೆ, ವಿಕಾಸಂ ಸೇವಾ ಫೌಂಡೇಶನ್ ಸಹಸಂಸ್ಥಾಪಕ ಧರ್ಮಪ್ರಸಾದ ರೈ ಉಪಸ್ಥಿತರಿದ್ದರು.
ಸಕ್ಷಮ ದಕ್ಷಿಣ ಕನ್ನಡದ ಭಾಸ್ಕರ ಹೊಸಮನೆ, ಲಯನ್ಸ್ ಕ್ಲಬ್‌ನ ಸುನೀಲ್ ಬಿ., ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಸತೀಶ್ ಜೋಗಿ, ಪ್ರಮುಖರಾದ ಅಶೋಕ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ವಿಕಾಸಂ ಸಹಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಕಾಸಂ ಸಹಸಂಸ್ಥಾಪಕರಾದ ಗೋಪಾಲ್ ಗೋವಿಂದತೋಟ ಸ್ವಾಗತಿಸಿದರು. ಹರೀಶ್ ಜೋಗಿ ವಂದಿಸಿದರು. ಸುರೇಖಾ ಯಳವರ ಕಾರ್ಯಕ್ರಮ ನಿರ್ವಹಿಸಿದರು.
‘ಆಟಿಸಂ-ವರ್ತಮಾನ ಹಾಗೂ ಭವಿಷ್ಯ’ ಎನ್ನುವ ವಿಷಯ ಕುರಿತು ವಿಚಾರ ಸಂಕಿರಣ ನಡೆಯಿತು. ಯೆನಪೋಯ ಡೆಂಟಲ್ ಕಾಲೇಜಿನ ಡೀನ್ ಡಾ.ಶ್ಯಾಮ್ ಎಸ್.ಭಟ್, ವಿಕಾಸಂ ಸೇವಾ ಫೌಂಡೇಶನ್ ಸಹಸಂಸ್ಥಾಪಕ ಹಾಗೂ ಸಿಇಒ ಗಣೇಶ್ ಭಟ್ ವಾರಣಾಸಿ ಮಾಹಿತಿ ನೀಡಿದರು.