ACCIDENT 
ಉಡುಪಿ

ಆಟೋರಿಕ್ಷಾ ಪಲ್ಟಿ, ಚಾಲಕಗೆ ಗಂಭೀರ ಗಾಯ

ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾ ಬಸ್ರೂರು ಗ್ರಾಮದ ಶಾರದಾ ಕಾಲೇಜು ಹತ್ತಿರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಆಟೋರಿಕ್ಷಾ ಚಾಲಕ ಬಾಬಣ್ಣ ಮೊಗವೀರ ಎಂಬುವರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿ

ಕುಂದಾಪುರ: ಕೋಟೇಶ್ವರ ಗ್ರಾಮದ ಪಟ್ಟಾಭಿ ರಾಮಚಂದ್ರ ದೇವಸ್ಥಾನ ಬಳಿ ಕೋಟೇಶ್ವರ ಪೇಟೆಯ ಮುಖ್ಯ ರಸ್ತೆಯಲ್ಲಿ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದೆ. ನಂಬಿಯಾರ್ ಜಂಕ್ಷನ್ ಕಡೆಯಿಂದ ಕಿನಾರ ಜಂಕ್ಷನ್ ಕಡೆಗೆ ಹೋಗುತ್ತಿದ್ದ ಕಾರು ರಸ್ತೆಯ ಎಡ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಮಲಾ ಎಂಬುವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡು ಚಿಕಿತ್ಸೆಗಾಗಿ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.