ಬಂಟ್ವಾಳ ತಾಲೂಕು ಗಮಕ ಪರಿಷತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ನಡೆಯಿತು. ಬಿ.ರಘುನಾಥ ಸೋಮಯಾಜಿ, ಸುಬ್ರಹ್ಮಣ್ಯ ಭಟ್, ಡಾ.ಗಿರೀಶ್ ಭಟ್, ಎ.ರವಿಶಂಕರ ಮಯ್ಯ ಉಪಸ್ಥಿತರಿದ್ದರು.
ಬಂಟ್ವಾಳ: ತಾಲೂಕು ಗಮಕ ಪರಿಷತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಕರ್ನಾಟಕ ಗಮಕ ಕಲಾಪರಿಷತ್ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಗಮಕಲಾ ಪರಿಷತ್ತು ಆಶ್ರಯದಲ್ಲಿ ಜರುಗಿತು.
ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ಎಚ್.ಎನ್. ಹೆಬ್ಬಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಘಟಕ ಅಧ್ಯಕ್ಷ ಪ್ರೊ.ಮದ್ದೂರು ಮೋಹನ ಕಲ್ಲೂರಾಯ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಸಜೀಪ ಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್, ಡಾ.ಗಿರೀಶ್ ಭಟ್, ನೂತನ ಅಧ್ಯಕ್ಷ ಎ.ರವಿಶಂಕರ ಮಯ್ಯ, ನೂತನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಮಂಜುಳಾ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ನಮೋ ಕುಮಾರವ್ಯಾಸ ಗಮಕಗೀತೆ ಹಾಗೂ ಕನಕದಾಸ ವಿರಚಿತ ದಾಸ ಸಾಹಿತ್ಯ ಗಮಕ ವಾಚನ ನಡೆಯಿತು.