ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿಯರ ಶೌಚಗೃಹ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ನೆರವೇರಿಸಿದರು. ಪ್ರಮುಖರಾದ ರೇಖಾ ಗಣೇಶ್, ರಾಘವೇಂದ್ರ ಆಚಾರ್ಯ, ಚಂದ್ರಶೇಖರ ಪೂಜಾರಿ ಅರಾಟೆ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ: ಸವಾಜದ ಒಗ್ಗೂಡುವಿಕೆಯಿಂದ ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ ಪ್ರತಿ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ಹೊಸಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ವಾಣವಾಗಲಿರುವ ಬಾಲಕ ಮತ್ತು ಬಾಲಕಿಯರ ಶೌಚಗೃಹಕ್ಕೆ ಭೂಮಿ ಪೂಜೆ ನೆರವೇರಿಸಿ ವಾತನಾಡಿದರು.
ಎಸ್‌ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ, ಹಳೇ ವಿದ್ಯಾರ್ಥಿ ಸಂದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅರಾಟೆ, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಜಯ ಕುವಾರ್ ಶೆಟ್ಟಿ, ಹಳೇ ವಿದ್ಯಾರ್ಥಿಗಳಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತಾರಾಮ ಶೆಟ್ಟಿ, ಅರುಣ್ ಆಚಾರ್ಯ, ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ, ತೇಜಪ್ಪ ಶೆಟ್ಟಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಮೊದಲಾದವರಿದ್ದರು. ಮುಖ್ಯ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹಶಿಕ್ಷಕಿ ಪ್ರತಿವಾ ಜಿ. ವಂದಿಸಿದರು.