ಮೂಡುಬಿದಿರೆ ಪುರಸಭೆಯಲ್ಲಿ ಭಾರತ್ ಜೋಡೋ ಯುವ ಸಂಘಟನೆ ಸ್ಥಾಪನೆ ಕುರಿತ ಸಿದ್ಧತಾ ಸಭೆಯಲ್ಲಿ ಇಂದು ಎಂ., ನಾಗರಾಜ ಪೂಜಾರಿ, ಪಿ.ಕೆ.ಥೋಮಸ್ ಮತ್ತಿತರರಿದ್ದರು.  
ಉಡುಪಿ

ಕ್ರೀಡೆ, ಸಂಸ್ಕೃತಿ ಉತ್ತೇಜನೆಗೆ ಭಾರತ್ ಜೋಡೋ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯ ಉತ್ತೇಜಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಸಂಘಟನೆ ಸ್ಥಾಪಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ತಿಳಿಸಿದರು.
ಭಾರತ್ ಜೋಡೋ ಯುವ ಸಂಘಟನೆ ಸ್ಥಾಪನೆಗೆ ಮೂಡುಬಿದಿರೆ ಪುರಸಭೆಯಲ್ಲಿ ಮಂಗಳವಾರ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಸಂಘಗಳನ್ನು ರಚಿಸಲು ಆ.30 ಅಂತಿಮ ದಿನವಾಗಿದ್ದು, ಎಲ್ಲ ವಾರ್ಡ್ ಸದಸ್ಯರು ಈ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮುಖ್ಯಾಧಿಕಾರಿ ಮನವಿ ಮಾಡಿದರು.
ಪರಿಸರ ಅಭಿಯಂತೆ ಶಿಲ್ಪಾ ಎಸ್., ಪುರಸಭೆ ಮಾಜಿ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಜೊಸ್ಸಿ ಮಿನೇಜಸ್, ಸುರೇಶ್ ಕೋಟ್ಯಾನ್, ಸುರೇಶ್ ಪ್ರಭು, ಪುರಂದರ ದೇವಾಡಿಗ, ದಿನೇಶ್ ಪೂಜಾರಿ, ನಾಮನಿರ್ದೇಶಿತ ಸದಸ್ಯ ವರುಣ್ ಉಪಸ್ಥಿತರಿದ್ದರು.

ಪುರಸಭಾ ವ್ಯಾಪ್ತಿಯಲ್ಲಿ 6 ಸಂಘಗಳನ್ನು ರಚಿಸಲು ಅವಕಾಶವಿದ್ದು, ಪ್ರತಿ ಸಂಘದಲ್ಲಿ 100 ಯುವಕರು ಇರಬೇಕು. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನ ನೀಡಲಾಗುವುದು. ಸಂಘದಲ್ಲಿ 16ರಿಂದ 35 ವಷರ್ದೊಳಗಿನ ಯುವ ಸಮುದಾಯ ಇರಬೇಕು. ಇದಕ್ಕೆ ಆಧಾರ್ ಕಡ್ಡಾಯ.

— ಇಂದು ಎಂ. ಪುರಸಭೆ ಮುಖ್ಯಾಧಿಕಾರಿ