ಅಪಘಾತ 
ಉಡುಪಿ

ಅಪಘಾತದಲ್ಲಿ ಬೈಕ್ ಸವಾರ ಸಾವು

ನೀರಚಿಲುಮೆ ಬಳಿ ಬೈಕ್ ಮತ್ತು ಸರ್ಕಾರಿ ಬಸ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಪಾರೆಂಕಿ ಪಾಂಗಳ ನಿವಾಸಿ ಬಾಬು ಕುಲಾಲ್ ಪುತ್ರ ಸನತ್(30) ಮೃತರು. ಸಹಸವಾರ ಭರತ್ ಬಳ್ಳಮಂಜ ಗಂಭೀರ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.