ಪಡುಬಿದ್ರಿ: ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಯಾವುದೇ ಸೂಚನೆ ನೀಡದೆ ಹಠಾತಾಗಿ ಕಾರು ನಿಲುಗಡೆ ಮಾಡಿದ ಪರಿಣಾಮ ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರರಾದ ರೋಹಿತ್ ಮತ್ತು ಧೀರಜ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ನಡ್ಸಾಲು ಬಳಿ ಬುಧವಾರ ಕಾರು ಡಿಕ್ಕಿಯಾದ ಪರಿಣಾಮ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.