ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು. 
ಉಡುಪಿ

ಅಪಘಾತದಲ್ಲಿ ಬೈಕ್ ಸವಾರ ಸಾವು

ಇಂದಿರಾ ಎನ್ ಕೆ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್‌ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಪುತ್ತೂರು ನಿವಾಸಿ ಅಶೋಕ್ (34) ಮೃತಪಟ್ಟಿದ್ದಾರೆ.
ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬೈಕ್‌ನ ಮುಂಭಾಗವೂ ಸಂಪೂರ್ಣ ಪುಡಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.