ಉಡುಪಿ: ಬಾಪೂಜಿ ಅಹಿಂಸಾ ತತ್ವ ವಿಶ್ವಮಾನ್ಯವಾಗಿದೆ. ಅವರ ಸರಳತೆ, ಸತ್ಯ ಮತ್ತು ನ್ಯಾಯ ಮಾರ್ಗವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಅಧ್ಯಾಪಕ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ದಯಾನಂದ್ ಕಿದಿಯೂರು ಹೇಳಿದರು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ,ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ದಿನೇಶ್ ಪುತ್ರನ್, ಮಹಾಬಲ ಕುಂದರ್, ನರಸಿಂಹಮೂರ್ತಿ, ಭುಜಂಗ ಶೆಟ್ಟಿ, ಕೇಶವ ಕೋಟ್ಯಾನ್, ಹರೀಶ್ ಶೆಟ್ಟಿ ಪಾಂಗಳ, ಕುಶಲ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ವಿಶ್ವಾಸ್ ಅಮೀನ್, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಜಯಶ್ರೀ ಶೇಟ್, ಸುದರ್ಶನ್ ಪಡುಕರೆ ಹಾಗೂ ತಾರಾನಾಥ್ ಸುವರ್ಣ ಅವರಿಂದ ಗಾಂಧಿಸ್ಮ$ತಿ ಸಂಗೀತ ಕಛೇರಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಭರತ್ ಕುಮಾರ್ ವಂದಿಸಿದರು.