ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ನಡೆಯಿತು.
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿ. ಆರ್. ಅಂಬೇಡ್ಕರ್ ಅವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳಾಗಿ ಅಭಿವೃದ್ಧಿಪಡಿಸಿ ವಿಶೇಷ ಗೌರವ ನೀಡಿದೆ. ಏ.19ರಂದು ಜಿಲ್ಲಾ ಬಿಜೆಪಿ, ಜಿಲ್ಲಾ ಎಸ್.ಸಿ. ಮೋರ್ಚಾ ಆಶ್ರಯದಲ್ಲಿ ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದಿಪ್ ರಾವ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ನೇಕಾರ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮೊದಲಾದವರು ಉಪಸ್ಥಿತರಿದ್ದರು.