ಉಡುಪಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸುಮಲತಾ ಮಾಹಿತಿ ನೀಡಿದರು. ನವೀನ್ ನಾಯಕ್, ಸುಗುಣಾ ನಾಯಕ್, ವಿನಯ್, ರಾಹುಲ್ ನಾಯಕ್ ಇದ್ದರು.
* ಉಡುಪಿ ಅಧ್ಯಕ್ಷೆ ಸುಮಲತಾ ಮಾಹಿತಿ
* 'ಛತ್ರಪತಿ ಶಿವಾಜಿ' ನಾಟಕ ಪ್ರದರ್ಶನ
ಉಡುಪಿ: ಬಿಜೆಪಿ ಉಡುಪಿ ನಗರ ಎಸ್ಟಿ ಮೋರ್ಚಾದ ವತಿಯಿಂದ ಕುಂಜಿಬೆಟ್ಟುವಿನಲ್ಲಿರುವ ಬಿಜೆಪಿ ಕಚೇರಿ ಮುಂಭಾಗದ ಮೈದಾನದಲ್ಲಿ ಮಾ.15ರಂದು ಸಂಜೆ 4:30ಕ್ಕೆ ಮರಾಠಿ ಸಂಸ್ಕೃತಿ ಹಾಗೂ ಪರಂಪರೆ ಅನಾವರಣಗೊಳಿಸುವ 'ಶಿವಾಜಿ ಸಂಗಮ' ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೋರ್ಚಾ ಅಧ್ಯಕ್ಷೆ ಸುಮಲತಾ ಮಾಹಿತಿ ನೀಡಿದರು.
ಉಡುಪಿಯ ಪತ್ರಿಕಾ ಭವನದಲ್ಲಿ ಶನಿವಾರ (ಮಾ.14) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮರಾಠಿ ಸಂಸ್ಕೃತಿಯ ಹಾಗೂ ಪರಂಪರೆಯ ಅನಾವರಣಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ತುಳು ನಾಟಕ ಪ್ರದರ್ಶನ
ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಪಾಲ್ಗೊಳ್ಳಲಿದ್ದಾರೆ. ಪ್ರಕಾಶ್ ಮಲ್ಪೆ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮರಾಠಿ ಸಮಾಜದ ಎಸ್ಎಸ್ಎಲ್ಸಿ, ಪಿಯುಸಿಯ ಸಾಧಕ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಹತ್ತರಕಟ್ಟೆಯ 18 ಗುರಿಕಾರರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಮುದಾಯದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಜಯಕುಮಾರ್ ಕೋಡಿಯಾಲಬೈಲ್ ನಿರ್ದೇಶನದಲ್ಲಿ 'ಛತ್ರಪತಿ ಶಿವಾಜಿ' ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮೋರ್ಚಾ ಉಪಾಧ್ಯಕ್ಷ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸುಗುಣಾ ನಾಯಕ್, ಕಾರ್ಯದರ್ಶಿ ವಿನಯ್, ಪದಾಧಿಕಾರಿ ರಾಹುಲ್ ನಾಯಕ್ ಇದ್ದರು.