ಉಡುಪಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ಬಿಜೆಪಿ ಕಚೇರಿಯ ಕಟ್ಟಡದ ಕಾಮಗಾರಿಯನ್ನು ಬಿ.ಎಲ್. ಸಂತೋಷ್ ಪರಿಶೀಲಿಸಿದರು. ಕುತ್ಯಾರು ನವೀನ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣಕುಮಾ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ ಇತರರಿದ್ದರು.
* ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಶಯ
* ಉಡುಪಿಯಲ್ಲಿ ನೂತನ ಕಟ್ಟಡ ಕಾಮಗಾರಿಯ ಪ್ರಗತಿ ವೀಕ್ಷಣೆ
ಉಡುಪಿ: ಜಿಲ್ಲೆಯಲ್ಲಿ ಬಿಜೆಪಿ ಸಶಕ್ತವಾಗಿದೆ. ಆದರೂ ರಾಷ್ಟ್ರದ ಹಿತಕ್ಕಾಗಿ ನಮ್ಮ ಸಂಘಟನೆ ಇನ್ನೂ ಬಲಿಷ್ಠವಾಗಬೇಕು. ಮುಂದಿನ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ನೂತನ ಸಮುಚ್ಚಯ ಉದ್ಘಾಟನೆಗೊಳ್ಳಬಹುದು. ಈ ಹೊಸ ಕಚೇರಿಯು 2028ರ ವಿಧಾನಸಭಾ ಚುನಾವಣಾ ಗೆಲುವಿಗೆ ದಿಕ್ಸೂಚಿ ಆಗುವಂತಾಗಲಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಶಯ ವ್ಯಕ್ತಪಡಿಸಿದರು.
ಉಡುಪಿಯ ಗುಂಡಿಬೈಲು ಬಳಿ ನಿರ್ಮಾಣಗೊಳ್ಳುತ್ತಿರುವ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ವೈ.ಭರತ್ ಶೆಟ್ಟಿ, ರಾಜ್ಯ ಪ್ರಮುಖರಾದ ವಿಕಾಸ್ ಪುತ್ತೂರು, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ್ ನಾಯಕ್, ಗುತ್ತಿಗೆದಾರ ಕೃಷ್ಣಮೂರ್ತಿ ಭಟ್ ಕೆಮ್ತೂರು, ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.