ಉಡುಪಿಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಬಿಎಲ್ಎ-2ಗಳ ಸಭೆಯಲ್ಲಿ ಎ.ಸಿ. ವಿನಯರಾಜ್ ಮಾತನಾಡಿದರು. ರಮೇಶ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ ಇದ್ದರು.
* ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ವಿನಯರಾಜ್ ಸಲಹೆ
* ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಿಎಲ್ಎ-2ಗಳ ಸಭೆ
ಉಡುಪಿ: ಎಸ್ಐಆರ್ ಪ್ರಕ್ರಿಯೆಯ ಒಂದು ಹಂತ ಮುಗಿದಿದೆ. ಇನ್ನೊಂದು ಹಂತದಲ್ಲೂ ಸಹ ಬಿಎಲ್ಎ-2ಗಳು ಉತ್ತಮವಾಗಿ ಜವಾಬ್ದಾರಿ ನಿಭಾಯಿಸಬೇಕು. ಯಾವುದೇ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು. ಅರ್ಹ ಮತದಾರರು ತಪ್ಪಿ ಹೋಗಿದ್ದಲ್ಲಿ ಫಾರ್ಮ್ ನಂಬರ್-6ರಲ್ಲಿ ಸೇರ್ಪಡಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ವಿನಯರಾಜ್ ತಿಳಿಸಿದರು.
ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಪ್ರಥಮ ಹಂತದ ಮಾಹಿತಿ ತಿಳಿದುಕೊಳ್ಳಲು ಬಿಎಲ್ಎ-2ಗಳ ಸಭೆಯಲ್ಲಿ ಮಾತನಾಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ರಾಜ್ಯದ ಯುವಕರನ್ನು ಸಂಘಟಿಸಿ ಸದೃಢಗೊಳಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ "ಭಾರತ್ ಜೋಡೋ' ಯುವಕರ ಸಂಘಟನೆ ಆರಂಭಿಸಿದೆ. ಮಹತ್ವಾಕಾಂಕ್ಷಿಯ ಈ ಯೋಜನೆ ಯಶಸ್ವಿಗೊಳಿಸಲು ಎಲ್ಲ ಬೂತ್ನ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35 ವರ್ಷದೊಳಗಿನ ಯುವಕ, ಯುವತಿಯರನ್ನು ನೋಂದಾಯಿಸಲು ಮುತುವರ್ಜಿ ವಹಿಸಬೇಕು ಎಂದರು.
ಸಭೆಯಲ್ಲಿ ಪಕ್ಷದ ಪ್ರಮುಖ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬಿಎಲ್ಎ-2ಗಳು ಉಪಸ್ಥಿತರಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಉಪಾಧ್ಯಕ್ಷ ಸತೀಶ್ ಕೊಡವೂರು ವಂದಿಸಿದರು.