ಶಾಸಕ ಯಶ್ಪಾಲ್ ಸುವರ್ಣ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿದರು.
ಉಡುಪಿ: ರಾಜ್ಯದಲ್ಲಿ ಅತೀಹೆಚ್ಚು ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಬಹಳಷ್ಟು ಕಾಳಜಿ ವಹಿಸಲಾಗುತ್ತಿದ್ದು, ಸರ್ಕಾರದ ಇಲಾಖೆಗಳು ಕೈಜೋಡಿಸುತ್ತಿರುವುದು ಶ್ಲಾನೀಯ ಕಾರ್ಯ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಗುರುವಾರ ಮಲ್ಪೆ ಬಂದರು ಕರಾವಳಿ ಕಾವಲು ಪೋಲಿಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ಮೀನುಗಾರಿಕಾ ಇಲಾಖೆ, ಮಲ್ಪೆ ಕರಾವಳಿ ಕಾವಲು ಪೋಲಿಸ್, ಮಲ್ಪೆ ಮೀನುಗಾರರ ಸಂ, ಮಲ್ಪೆ ಬಂದರು ಸಹಕಾರಿ ನೌಕರರ ಸಂ, ಜಿಲ್ಲಾ ಆಸ್ಪತ್ರೆ ರಕ್ತನಿಧಿ, ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಮಣಿಪಾಲ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯಾಧಿಕಾರಿ ಡಾ. ಗಣೇಶ್ ಮೋಹನ್, ಮಲ್ಪೆ ಬಂದರು ಸಹಕಾರಿ ನೌಕರರ ಸಂದ ಅಧ್ಯಕ್ಷ ರಾಮ ಸುವರ್ಣ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಕರಾವಳಿ ಕಾವಲು ಪೋಲಿಸ್ ಪಡೆಯ ಎಎಸ್ಐ ಭಾಸ್ಕರ್ ಶೆಟ್ಟಿಗಾರ್ ಸ್ವಾಗತಿಸಿ, ವಂದಿಸಿದರು.