ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ರಕ್ತದಾನ ಶಿಬಿರ ಉದ್ಘಾಟಿಸಿದರು.
ಉಡುಪಿ: ಜಿಲ್ಲೆಯ ಜನರು ಸ್ವಯಂಪ್ರೇರಿತರಾಗಿ ಸಮಾಜುಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ. ತಮಗೆ ಎಷ್ಟು ಸಾಧ್ಯವೋ ಅಷ್ಟು ಸಮಾಜಕ್ಕೆ ಸಹಾಯಹಸ್ತ ಚಾಚುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.
ಗಾಂಧಿ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅತೀ ಹೆಚ್ಚು ರಕ್ತದಾನ ಶಿಬಿರಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ರಕ್ತದಾನ ಸಮಾಜ ಜೀವಸೆಲೆಯಾಗಿದೆ. ಇನ್ನೊಬ್ಬರ ಜೀವ ಉಳಿಸುವ ಮಹತ್ತರ ಕಾರ್ಯ ಭಿನಂದನೀಯ ಎಂದು ಹೇಳಿದರು.
ಭಾರತೀಯ ವೈದ್ಯ ಮಂಡಳಿ ಉಡುಪಿ ಕರಾವಳಿ ಘಟಕದ ಅಧ್ಯಕ್ಷ ಡಾ.ಅಶೋಕ್ ಕುಮಾರ್ ಕಾಮತ್, ಗಾಂಧಿ ಆಸ್ಪತ್ರೆಯ ಸ್ಥಾಪಕ ಹರಿಶ್ಚಂದ್ರ, ಲಕ್ಷಿ$್ಮ ಹರಿಶ್ಚಂದ್ರ, ಡಾ. ಪಂಚಮಿ, ಡಾ. ವಿದ್ಯಾ ತಂತ್ರಿ ಹಾಗೂ ಜಿಲ್ಲಾ ರಕ್ತನಿಧಿಯ ಮುಖ್ಯಸ್ಥೆ ಡಾ.ವೀಣಾ ಕುಮಾರಿ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಪ್ರಸ್ತಾವಿಕವಾಗಿ ಮಾತನಾಡಿ, ಛಾಯಾಚಿತ್ರಗಳ ಮಾರಾಟದಿಂದ ಸಂಗ್ರಹವಾಗುವ ಮೊತ್ತವನ್ನು ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಹೋಮ್ ಡಾಕ್ಟರ್ ಫೌಂಡೇಶನ್ಗೆ ದಾನ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಛಾಯಾಚಿತ್ರ ಪ್ರದರ್ಶನ: ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ತೆಗೆದಿರುವ 'ಬಹುಚಿತ್ರ ಜಗತ್' ಛಾಯಾಚಿತ್ರಗಳ ಪ್ರದರ್ಶನವನ್ನು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸಿದರು.