ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಉದ್ಘಾಟಿಸಿದರು. ಶ್ರೀಧರ್ ಕೆ.ವಿ., ಸುಹಾಸ್ ಕುಮಾರ್ ಬಿ., ಡಾ.ಸುಧೀರ್ ಕೆ.ವಿ., ಡಾ.ಮಾಲಿನಿ ಅಂಚನ್ ಮೊದಲಾದವರು ಉಪಸ್ಥಿತರಿದ್ದರು. 
ಉಡುಪಿ

ರಕ್ತದಾನ ಇನ್ನೊಬ್ಬರಿಗೆ ಜೀವ ನೀಡುವ ಮಹಾದಾನ

ಬೆಳ್ತಂಗಡಿ: ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದರ ಜತೆಗೆ ಸಮಾಜಮುಖಿ ಚಿಂತನೆಯನ್ನು ನಿರಂತರ ಬೆಳೆಸುತ್ತಿದೆ. ಈಗಾಗಲೇ ಅನೇಕ ಶಿಬಿರಗಳನ್ನು ಆಯೋಜಿಸಿ ಸಾಮಾಜಮುಖಿ ಕಾರ್ಯಕ್ಕೆ ಒತ್ತು ನೀಡಲಾಗಿದೆ. ರಕ್ತದಾನ ಶ್ರೇಷ್ಠ ದಾನವಾಗಿದ್ದು ಅನೇಕರ ಬದುಕಿಗೆ ಜೀವ ತುಂಬುವ ಮಹಾದಾನ ಎಂದು ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಹೇಳಿದರು.
ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಎನ್ನೆಸ್ಸೆಸ್ ಘಟಕ ವತಿಯಿಂದ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬೆಳ್ತಂಗಡಿ ರೋಟರಿ ಕ್ಲಬ್, ಫೆಡರಲ್ ಬ್ಯಾಂಕ್, ಮಂಗಳೂರು ಅತ್ತಾವರ ಕೆಎಂಸಿ ರಕ್ತನಿಧಿ ಕೇಂದ್ರ, ಮಂಗಳೂರು ವಿಭಾಗದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಎಸ್‌ಡಿಎಂ ಕಾಲೇಜು ರೆಡ್‌ಕ್ರಾಸ್ ಘಟಕಗಳ ಸಹಯೋಗದೊಂದಿಗೆ ನಡೆದ ಬೃಹತ್ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಕೆ.ವಿ. ಶಿಬಿರ ಉದ್ಘಾಟಿಸಿದರು. ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ.ವಿದ್ವತಾ, ಬೆಳ್ತಂಗಡಿ ಫೆಡರಲ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಸುಹಾಸ್ ಕುಮಾರ್ ಬಿ., ಯೋಜನಾಧಿಕಾರಿ ಡಾ.ಸುಧೀರ್ ಕೆ.ವಿ., ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಮೀನಾಕ್ಷಿ ರಮೇಶ್, ಹಿರಿಯ ಯೋಜನಾಧಿಕಾರಿ ಡಾ.ಮಹೇಶ್ ಶೆಟ್ಟಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ.ಮಾಲಿನಿ ಅಂಚನ್ ಸ್ವಾಗತಿಸಿದರು. ಹರ್ಷಿತಾ ನಿರೂಪಿಸಿದರು. ಮಂಜುಶ್ರೀ ವಂದಿಸಿದರು. ಒಟ್ಟು 220 ಯುನಿಟ್ ರಕ್ತ ಸಂಗ್ರಹಿಸಲಾಯಿತು.