ಶಾಸಕ ಯಶ್​ಪಾಲ್​ ಸುವರ್ಣ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.  
ಉಡುಪಿ

ನಾರಾಯಣ ಗುರುಗಳು ಜಗತ್ತಿಗೆ ಸಮಾನತೆ ಬೆಳಕು ನೀಡಿದ ಸಂತ: ಯಶ್ಪಾಲ್‌

ಉಡುಪಿ : ದೇಶ ಕಂಡ ಮಹಾನ್​ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆ ಮೂಲಕ ಹಿಂದುಳಿದ ಸಮಾಜದವರು ಮುಖ್ಯ ವಾಹಿನಿಗೆ ಕಾರಣಕರ್ತರಾಗಿದ್ದಾರೆ. ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಮೂಲಕ ದೇಶದೆಲ್ಲೆಡೆ ಸಂಚರಿಸಿ, ಜಗತ್ತಿಗೆ ಸಮಾನತೆ ಬೆಳಕನ್ನು ಹರಿಸಿದ್ದಾರೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು.
ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ದಾರ್ಶನಿಕ, ಆಧ್ಯಾತ್ಮಿಕ ಸಾಧಕರಾಗಿದ್ದ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ ನಿಮಾರ್ಣಕ್ಕೆ ಮುಂದಾಗಿದ್ದರು. ಕೆಳವರ್ಗದ ಜನರಿಗಾಗಿ ದೇವಾಲಯಗಳನ್ನು ನಿರ್ಮಿಸಿ, ದೇವರನ್ನು ಪೂಜಿಸಲು ಅವಕಾಶ ಮಾಡಿಕೊಟ್ಟಿದ್ದರು. ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು. ಅಸ್ಪ-----ೃಶ್ಯತೆ, ಜಾತೀಯತೆ ಸೇರಿದಂತೆ ಸಾಮಾಜಿಕ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು. ಗುರುಗಳ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗೂರ್​ ಮಾತನಾಡಿ, ದೀನರ, ಶೋಷಿತರ, ಹಿಂದುಳಿದವರ ಅಸ್ಪಶ್ಯರಿಗಾಗಿ ಮಿಡಿಯುವ ಹೃದಯವನ್ನು ಹೊಂದಿದ ನಾರಾಯಣಗುರುಗಳು ಮೌನ ಕ್ರಾಂತಿಯನ್ನು ಮಾಡಿದ್ದಾರೆ. ಸಮಾಜದ ಆರ್ಥಿಕ ಮತ್ತು ನೈತಿಕ ಅಧHಪತನಕ್ಕೆ ದಾರಿ ಮಾಡಿಕೊಟ್ಟಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಸಾತ್ವಿಕ ಸಮರ ಸಾರಿದ್ದರು ಎಂದರು.

ಉಪನ್ಯಾಸಕ ಸಚೇಂದ್ರ ಅಂಬಾಗಿಲು ಉಪನ್ಯಾಸ ನೀಡಿದರು. ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ್​ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಜಿಲ್ಲೆಯಾದ್ಯಂತ ಐದು ವಲಯಗಳಲ್ಲಿ ಆಯೋಜಿಸಲಾದ ಪ್ರಬಂಧ ಸ್ಪರ್ದೆ ಹಾಗೂ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್​ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಜಿಲ್ಲಾ ಪೊಲೀಸ್​ ಅಧೀಕ್ಷಕ ಹರಿರಾಂ ಶಂಕರ್​, ಜಿಲ್ಲಾ ಪಂಚಾಯತ್​ ಉಪ ಕಾರ್ಯದರ್ಶಿ ಎಸ್​.ಎಸ್​ ಕಾದ್ರೋಳ್ಳಿ, ಬಿಲ್ಲವರ ಸೇವಾ ಸಂಘ ಅಧ್ಯಕ್ಷ ಶಶಿಧರ ಎಂ. ಅಮೀನ್​ ವಡಭಾಂಡೇಶ್ವರ ಮತ್ತಿತರರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ತೇಜಸ್​ ಎಂ ಬಂಗೇರ ನಿರೂಪಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ವಂದಿಸಿದರು.
"

ನಾರಾಯಣ ಗುರುಗಳ ಜೀವಿತಾವಧಿಯಲ್ಲಿ ತಾಂಡವವಾಡುತ್ತಿದ್ದ ಮೇಲು-ಕೀಳು, ಅಸ್ಪಶ್ಯತೆ ನಿವಾರಣೆಗೆ ಶ್ರಮವಹಿಸುವುದರೊಂದಿಗೆ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆ ಹೊಂದಿದ್ದರು. ಕೇರಳದ ಸಂಘರ್ಷಮಯವಾದ ಪ್ರದೇಶದಲ್ಲಿ ಶಾಂತಿಯ ಕ್ರಾಂತಿಯೊಂದಿಗೆ ಸಾಮಾಜಿಕ ಬದಲಾವಣೆಯನ್ನು ತಂದಿದ್ದರು.

— ಕೋಟ ಶ್ರೀನಿವಾಸ ಪೂಜಾರಿ, ಸಂಸದ.