Crime 
ಉಡುಪಿ

ಪ್ರಯಾಣಿಕರ ಸುರಕ್ಷೆ ಮರೆತು ಬಸ್ ಸಂಚಾರ

ಇಂದಿರಾ ಎನ್ ಕೆ

ಪಡುಬಿದ್ರಿ:

ಸುರಕ್ಷತೆ ಮರೆತು ಮಿತಿ ಮೀರಿದ ಪ್ರಯಾಣಿಕರನ್ನು ತುಂಬಿಸಿಕೊಂಡು ಉಡುಪಿಯತ್ತ ಸಾಗುತ್ತಿದ್ದ ಖಾಸಗಿ ವೇಗದೂತ ಬಸ್ಸೊಂದರ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನೇತಾಡಿಕೊಂಡು ಹೋಗುತ್ತಿರುವ ಬಗ್ಗೆ ಬಸ್ ಹಿಂಬದಿಯಲ್ಲಿ ಚಲಿಸುತ್ತಿದ್ದ ಕಾರಿನವರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳಾದ ಬಳಿಕ ಎಚ್ಚೆತ್ತ ಪೊಲೀಸರು ಬಸ್‌ನವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೇ ರೀತಿ ದಿನ ನಿತ್ಯ ಕಾರ್ಕಳ ಕಡೆಗೆ ಸಾಗುವ ಬಸ್‌ಗಳು ಪ್ರಯಾಣಿಕರ ಸುರಕ್ಷತೆ ಮರೆತು ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದ್ದಾರೆ. ಹೆಚ್ಚಿನ ಅವಘಡ ಸಂಭವಿಸುವ ಮೊದಲೇ ಎಚ್ಚೆತ್ತು ಪೊಲೀಸರು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.