ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್. ಮತ್ತು ಸಂಚಾಲಕ ಚಂದ್ರಶೇಖರ್ ನಾಯರ್ ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಡಾ.ಪಿ.ಜಿ.ಆರ್.ಸಿಂಧ್ಯಾ, ಡಾ.ದೇವಿಪ್ರಸಾದ್ ಕಾನತ್ತೂರು, ವಿಮಲಾ ರಂಗಯ್ಯ, ಮಾಧವ ಬಿ.ಕೆ., ಎಂ.ಪ್ರಭಾಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.  
ಉಡುಪಿ

ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ

ಇಂದಿರಾ ಎನ್ ಕೆ
ಸುಬ್ರಹ್ಮಣ್ಯ: ಪ್ರಕೃತಿ ಅಧ್ಯಯನ ಶಿಬಿರದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡುತ್ತದೆ. ಇಂಥ ಶಿಬಿರಗಳು ಅವರಲ್ಲಿ ಪರಿಸರದ ತಿಳಿವಳಿಕೆಯ ಜ್ಞಾನ ಮೂಡಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಮುಖ್ಯ ಆಯುಕ್ತ ಡಾ.ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಮಾಧವ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ್ ಭಟ್, ದ.ಕ. ಜಿಲ್ಲಾ ಗೈಡ್ ಆಯುಕ್ತೆ ವಿಮಲಾ ರಂಗಯ್ಯ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಡಾ.ದೇವಿಪ್ರಸಾದ್ ಕಾನತ್ತೂರು, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಜಿಲ್ಲಾ ಸ್ಕೌಟ್ಸ್ ಸಹಾಯಕ ಆಯುಕ್ತ ದೇವಿಪ್ರಸಾದ್ ಜಾಕೆ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನಾ ಎಚ್., ಪಂಜ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್., ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ. ಉಪಸ್ಥಿತರಿದ್ದರು.

ಗೌರವಾರ್ಪಣೆ

ಪಂಜ ಸ್ಥಳೀಯ ಸಂಸ್ಥೆ ವತಿಯಿಂದ ಡಾ.ಪಿ.ಜಿ.ಆರ್.ಸಿಂಧ್ಯಾ, ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್. ಮತ್ತು ಸಂಚಾಲಕ ಚಂದ್ರಶೇಖರ್ ನಾಯರ್ ಅವರನ್ನು ಗೌರವಿಸಲಾಯಿತು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.