ಕಾಸರಗೋಡು: ಕುಂಬಳೆ- ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪ್‌ಗೆ ಢಿಕ್ಕಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿದ್ದ ಮುಳ್ಳೇರಿಯ ನಿವಾಸಿಗಳು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮುಳ್ಳೇರಿಯದಿಂದ ಕುಂಬಳೆ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.