ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಕಾರಿನಲ್ಲಿದ್ದ ಚಾಲಕ, ಯುವತಿ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಮಣಿಪಾಲದ ಆತ್ರಾಡಿ ನಿವಾಸಿ ಗೌರವ್ ಎಂಬುವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಕಾರ್ನಾಡ್ ಬೈಪಾಸ್ ಬಳಿಯ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೂರು ಬೃಹದಾಕಾರದ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ತಿರುಗಿ ನಿಂತಿದೆ. ಅಪಘಾತದ ರಭಸಕ್ಕೆ ಕಾರಿಗೆ ಸಂಪೂರ್ಣ ಹಾನಿಯಾಗಿದೆ.
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆದ್ದಾರಿ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ಕಾರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.