ಕಾರು ಬೆಂಕಿಗಾಹುತಿಯಾಗಿರುವುದು. 
ಉಡುಪಿ

ಸಾಸ್ತಾನದಲ್ಲಿ ಕಾರು ಬೆಂಕಿಗಾಹುತಿ

ಸಾಸ್ತಾನ ಟೋಲ್ ಸಮೀಪ ಗುಂಡ್ಮಿ- ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ

ಕೋಟ: ಸಾಸ್ತಾನ ಟೋಲ್ ಸಮೀಪ ಗುಂಡ್ಮಿ- ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಬೆಂಕಿಗಾಹುತಿಯಾಗಿದೆ.

ಗೋಕರ್ಣದಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕ ದಾಟಿ ಪಕ್ಕದ ಚರಂಡಿಗೆ ಉರುಳಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.