ರಸ್ತೆಯಲ್ಲಿ ಕಾರು ಪಲ್ಟಿಯಾಗಿರುವುದು. 
ಉಡುಪಿ

ಟಯರ್ ಸ್ಫೋಟಗೊಂಡು ಕಾರು ಪಲ್ಟಿ

ಚಾಲಕ ಪ್ರಾಣಾಪಾಯದಿಂದ ಪಾರು

ಕೋಟ: ಸಾಲಿಗ್ರಾಮದ ಬಾರೊಂದರ ಸಮೀಪ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಿಯಾ ಕಾರಿನ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಮೇಲಿದ್ದ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕನೊಬ್ಬರೇ ಇದ್ದು, ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾದರೂ ತಕ್ಷಣ ಏರ್‌ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಎರಡು ವಿದ್ಯುತ್ ಕಂಬಗಳು ತುಂಡಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೋಟ ಪೊಲೀಸರು ಪರಿಶೀಲನೆ ನಡೆಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ವಾಡಿದರು.