ಮಧುಮೇಹ ಮತ್ತು ರಕ್ತದೊತ್ತಡ, ಕಣ್ಣಿನ ತಪಾಸಣೆ ಉಚಿತ ಶಿಬಿರವನ್ನು ಹೆಬ್ರಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮಾಮಣಿ ರಾವ್ ಉದ್ಘಾಟಿಸಿದರು. ಪ್ರಮುಖರಾದ ಚಂದ್ರಿಕಾ, ಶಾಲಿನಿ ಪ್ರೇಮ್‌ಕುಮಾರ್ ಅಲ್ಬಾಡಿ, ಭಾರ್ಗವಿ ಪಿ.ಭಟ್ ಗೋಳಿಯಂಗಡಿ, ಬಿ.ರಾಜೇಂದ್ರ ಕಿಣಿ ಬೆಳ್ವೆ, ವೈ.ಪಟ್ಟಾಭಿರಾಮ್ ಭಟ್ ಮರೂರು, ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ಸುದ್ದಿಜಾಲ ಬೆಳ್ವೆ
ಜನರು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಕಾಳಜಿಯೊಂದಿಗೆ ಸೂಕ್ತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ಪಡೆದುಕೊಳ್ಳಬೇಕು. ಸಂಘ- ಸಂಸ್ಥೆಗಳು ಹಮ್ಮಿಕೊಳ್ಳುವ ವೈದ್ಯಕೀಯ ಉಚಿತ ತಪಾಸಣೆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೆಬ್ರಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮಾಮಣಿ ರಾವ್ ಹೇಳಿದರು.
ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ವತಿಯಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯಿತಿ, ಸಮುದಾಯ ಆರೋಗ್ಯ ಕೇಂದ್ರ(ಎನ್‌ಸಿಡಿ) ಹೆಬ್ರಿ ವಿಭಾಗ ಸಹಯೋಗದಲ್ಲಿ ಬೆಳ್ವೆಯಲ್ಲಿ ಹಮ್ಮಿಕೊಂಡ ಮಧುಮೇಹ ಮತ್ತು ರಕ್ತದೊತ್ತಡ, ಕಣ್ಣಿನ ತಪಾಸಣೆ ಉಚಿತ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಚಂದ್ರಿಕಾ, ಕೋಶಾಧಿಕಾರಿ ಭಾರ್ಗವಿ ಪಿ.ಭಟ್ ಗೋಳಿಯಂಗಡಿ, ಸ್ಥಾಪಾಕಾಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ, ಉಪಾಧ್ಯಕ್ಷ ಮುಸ್ತಾಕ್ ಅಹಮ್ಮದ್ ಬೆಳ್ವೆ, ಹೆಬ್ರಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ನೇತ್ರ ಸಹಾಯಕಿ ಮಾಲತಿ, ಆಪ್ತ ಸಮಾಲೋಚಕಿ ಪವಿತ್ರಾ, ಶುಶ್ರೂಷಕಿ ಶರ್ಮಿಳಾ, ಪ್ರಯೋಗ ಶಾಲೆ ತಂತ್ರಜ್ಞೆ ಮಮತಾ, ಸಿಬ್ಬಂದಿ ಸ್ವಪ್ನಾ ಮತ್ತಿತರರು ಉಪಸ್ಥಿತರಿದ್ದರು.
ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ವೈ.ಪಟ್ಟಾಭಿರಾಮ್ ಭಟ್ ಮರೂರು ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ಸಂಘಟಕ ಕೆ.ಸಂಜೀವ ಆರ್ಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಾಲಿನಿ ಪ್ರೇಮ್‌ಕುಮಾರ್ ಅಲ್ಬಾಡಿ ವಂದಿಸಿದರು.