ಕುಂದಾಪುರ: ಕೋಟೇಶ್ವರ ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯ ಬಳಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಕುಂದಾಪುರದಿಂದ ಉಡುಪಿಗೆ ಹೋಗುವ ರಾ.ಹೆ. 66ರ ಎಡಬದಿಯಲ್ಲಿ ರಸ್ತೆ ದಾಟಲು ನಿಂತುಕೊಂಡಿದ್ದ ಹಲುವಳ್ಳಿ ಗ್ರಾಮದ ಕರ್ಜೆ ನಿವಾಸಿ ರಾಮಣ್ಣ ಶೆಟ್ಟಿ (70) ಎಂಬುವರಿಗೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಸನ್ವಾಲ್ ರಾಮ್ ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಬಿ.ಎಚ್. ಜಂಕ್ಷನ್ ಬಳಿ ಬಸ್ರೂರು ಸಿದ್ದಾಪುರ ರಾಜ್ಯ ಹೆದ್ದಾರಿ 52ರಲ್ಲಿ ಬಸ್ರೂರು ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಳ್ಕೂರು ಗ್ರಾಮದ ಬಿ.ಎಚ್. ನಿವಾಸಿ ರವಿಕಾಂತ ಶೆಟ್ಟಿ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರವಿಕಾಂತ ಶೆಟ್ಟಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ನೇರಳಕಟ್ಟೆ ಬಳಿ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೇರಳಕಟ್ಟೆ ಬಟ್ರಾಡಿ ನಿವಾಸಿ ರಾಘವ(38) ಎಂಬುವರು ಸಂತೋಷ್ ಎಂಬುವರೊಂದಿಗೆ ಸ್ಕೂಟರ್ನಲ್ಲಿ ಕರ್ಕುಂಜೆ ಗ್ರಾಮದ ಮಾವಿನಕಟ್ಟೆ-ನೇರಳಕಟ್ಟೆ ಮುಖ್ಯರಸ್ತೆಯಲ್ಲಿ ನೇರಳಕಟ್ಟೆಗೆ ಹೋಗುತ್ತಿರುವಾಗ ಮೋರಿಕಟ್ಟೆಯ ಬಳಿ ಮಹಮ್ಮದ್ ಅದ್ನಾನ್ ಎಂಬುವರು ಮನೆಯ ಆವರಣದಿಂದ ಕಾರನ್ನು ನಿರ್ಲಕ್ಷೃದಿಂದ ಸವಾರಿ ಮಾಡಿಕೊಂಡು ಬಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಸಂತೋಷ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ಸವಾರ ರಾಘವ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.