crime 
ಉಡುಪಿ

ತಾಯಿ ಕಂಕುಳದಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು

ಗೋಪಾಲಕೃಷ್ಣ ಪಾದೂರ್
ಉಡುಪಿ: ಕಿನ್ನಿಮೂಲ್ಕಿಯಲ್ಲಿ ಬಾವಿಕಟ್ಟೆಯಲ್ಲಿ ನಿಂತಿದ್ದ ತಾಯಿ ಕಂಕುಳದಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಟನೆ ಮಂಗಳವಾರ ನಡೆದಿದೆ.

ಕೀರ್ತನಾ ಮೃತ ಮಗು. ಕಿನ್ನಿಮೂಲ್ಕಿ ನಿವಾಸಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಕಟ್ಟೆಯಲ್ಲಿ ಮಗುವನ್ನು ಕಂಕುಳದಲ್ಲಿ ಇಟ್ಟುಕೊಂಡು ಬಕೆಟ್​ನಲ್ಲಿ ನೀರು ತೆಗೆಯುತ್ತಿದ್ದರು. ಈ ವೇಳೆ ನಾಯಿ ಬೊಗಳಿದ್ದು, ಇದರಿಂದ ಗಾಬರಿಗೊಂಡ ಮಗು ಕೊಸರಾಡಿ ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ನಯನ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಅದಾಗಲೇ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.