ಕ್ರೀಡಾ ಸಂಭ್ರಮವನ್ನು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಪ್ರೊ.ರಮೇಶ್ ಉದ್ಘಾಟಿಸಿದರು. ಅಸೈಗೋಳಿ ಯುವಕ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಫುಲ್ಲು, ಬಂಟರ ಸಂಘ ಉಳ್ಳಾಲ ವಲಯಾಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್, ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘ ಅಧ್ಯಕ್ಷ ಎ.ಕೆ.ಅಬ್ದುಲ್ ರಹ್ಮಾನ್ ಕೋಡಿಜಾಲ್ ಮತ್ತಿತರರಿದ್ದರು.
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಪ್ರಸ್ತುತ ದಿನಗಳಲ್ಲಿ ಕೇವಲ ಪಠ್ಯ ಶಿಕ್ಷಣ ಸಾಲದು, ಪಠ್ಯೇತರ ಚಟುವಟಿಕೆಗಳೂ ಅಗತ್ಯ. ಸ್ಪರ್ಧೆಗಳ ಆಯೋಜನೆಯಿಂದ ಮಕ್ಕಳು ಮೊಬೈಲ್ ಬಿಟ್ಟು ಮೈದಾನದಲ್ಲಿ ಕಳೆಯುವ ಅವಕಾಶ ಸಿಗುತ್ತದೆ ಎಂದು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ಉಪನಿರ್ದೇಶಕ ಪ್ರೊ.ರಮೇಶ್ ಹೇಳಿದರು.
ಅಸೈಗೋಳಿ ಯುವಕ ಮಂಡಲ, ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ನಡೆಯಲಿರುವ 38ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ‘ಅಸೈಗೋಳಿ ಮೊಸರು ಕುಡಿಕೆ’ ಉತ್ಸವದ ಪ್ರಯುಕ್ತ ಅಸೈಗೋಳಿ ಯುವಕ ಮಂಡಲ ಕೇಂದ್ರ ಮೈದಾನದಲ್ಲಿ ಭಾನುವಾರ ‘ಕ್ರೀಡಾ ಸಂಭ್ರಮ-2026’ ಉದ್ಘಾಟಿಸಿ ಮಾತನಾಡಿದರು.
ಬಂಟರ ಸಂಘ ಉಳ್ಳಾಲ ವಲಯಾಧ್ಯಕ್ಷ ರವೀಂದ್ರ ರೈ ಕಲ್ಲಿಮಾರ್ ಮಾತನಾಡಿದರು. ಅಸೈಗೋಳಿ ಯುವಕ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಫುಲ್ಲು ಅಧ್ಯಕ್ಷತೆ ವಹಿಸಿದ್ದರು. ಕೊಣಾಜೆ ಮಂಗಳ ಗ್ರಾಮೀಣ ಯುವಕ ಸಂಘ ಅಧ್ಯಕ್ಷ ಎ.ಕೆ.ಅಬ್ದುಲ್ ರಹ್ಮಾನ್ ಕೋಡಿಜಾಲ್, ಪರಂಜ್ಯೋತಿ ಮಾತೃಮಂಡಳಿ ಅಧ್ಯಕ್ಷೆ ನಾಗವೇಣಿ ಶೆಟ್ಟಿ, ಸಂಚಾಲಕ ಕೃಷ್ಣಪ್ಪ, ಜತೆ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಸ್ವಾಗತಿಸಿದರು. ಕ್ರೀಡಾ ಸಂಚಾಲಕ ರಾಧಾಕೃಷ್ಣ ರೈ ವಂದಿಸಿದರು. ರಾಜೀವ ಟಿ.ನಾಯಕ್ ನಿರೂಪಿಸಿದರು.