ಕುಂದಾಪುರದ ಭಂರ್ಡಾಕಾರ್ಸ್ ಕಾಲೇಜಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ತರಬೇತಿ ಕಾರ್ಯಾಗಾರ ನಡೆಯಿತು. ಪ್ರಮುಖರಾದ ಸ್ವರೂಪಾ ಟಿ.ಕೆ., ಗಂಗಾಧರ್, ಅಬೀದ್ ಗದ್ಯಾಳ ಮೊದಲಾದವರಿದ್ದರು. 
ಉಡುಪಿ

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಮತದಾರರ ಹೊಸ ಪಟ್ಟಿ ತಯಾರಿಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕರೆ ನೀಡಿದರು.
ಕುಂದಾಪುರದ ಭಂರ್ಡಾಕಾರ್ಸ್ ಕಾಲೇಜಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026ರ ಸಂಬಂಧ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್‌ರಿಗೆ ಮಂಗಳವಾರ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮತಗಟ್ಟೆ ಅಧಿಕಾರಿಗಳು ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಆ ವೇಳೆ ನೀಡುವ ನಮೂನೆಯನ್ನು ಮತದಾರರು ಸಂಪೂರ್ಣ ಭರ್ತಿ ವಾಡಿ ಪ್ರಸ್ತುತ ಭಾವಚಿತ್ರ ಅಂಟಿಸಿ ಕಡ್ಡಾಯವಾಗಿ ಸಹಿ ವಾಡಿ ಒಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಗೆ ಹಿಂದಿರುಗಿಸಬೇಕು. ಒಂದೊಮ್ಮೆ ನೀಡದಿದ್ದಲ್ಲಿ ಮತಗಟ್ಟೆ ಅಧಿಕಾರಿಗಳು ಮೂರು ಬಾರಿ ಮನೆ ಬಾಗಿಲಿಗೆ ಭೇಟಿ ನೀಡಲಿದ್ದಾರೆ. ಈ ಪ್ರಕ್ರಿಯೆ ಕುರಿತು ಗಂಭೀರವಾಗಿ ಪರಿಗಣಿಸಿ ಬೂತ್‌ಮಟ್ಟದ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಾಸ್ಟರ್ ತರಬೇತುದಾರ ಗಂಗಾಧರ್ ಮಾತನಾಡಿ, ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತಾ ಕಾರ್ಯಗಳು ಮತ್ತು ತರಬೇತಿ ಪ್ರಕ್ರಿಯೆಗಳು ನಡೆಯಲಿವೆ. 30ರಿಂದ 1 ತಿಂಗಳ ಕಾಲ ಬಿಎಲ್‌ಒಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ, ನಮೂನೆಗಳನ್ನು ಪಡೆದು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ವಾಡಲಾಗುವುದು. ಜುಲೈ 29ರಂದು ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟ, ಸೆಪ್ಟೆಂಬರ್ 4ರ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 3ರವರೆಗೆ ಸ್ವೀಕೃತವಾದ ಆಕ್ಷೇಪಣೆಗಳ ಇತ್ಯರ್ಥಗೊಳಿಸಬೇಕು ಹಾಗೂ 7ರಂದು ಅಂತಿಮ ಮತದಾರರ ಪಟ್ಟಿ ಅಧಿಕೃತವಾಗಿ ಪ್ರಕಟ ವಾಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಶಿಕ್ಷಣ ಇಲಾಖೆಯ ಸಂತೊಷ್ ಕುಮಾರ್, ಸದಾನಂದ್, ಬಿ.ಎಲ್.ಒ., ಬಿ.ಎಲ್.ಎ. ಮತ್ತಿತರರು ಉಪಸ್ಥಿತರಿದ್ದರು.

ಸಮಗ್ರ ಪರಿಷ್ಕರಣೆ

ಅರ್ಹ ಮತದಾರರು ಯಾರೂ ಚುನಾಚಣಾ ಪ್ರಕ್ರಿಯೆಯಿಂದ ಹೊರಗುಳಿಯದಂತೆ ನಿಗಾ ವಹಿಸಬೇಕು. ವರ್ಷದಲ್ಲಿ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ 1ರಂದು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತದೆ. 18 ವರ್ಷ ಪೂರೈಸಿದವರು ಅರ್ಜಿ ಸಲ್ಲಿಸಬಹುದು. ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಾಗಿ ಮತದಾರರ ಹೊಸ ಪಟ್ಟಿ ತಯಾರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.

ಪ್ರಜಾ ಪ್ರಾತಿನಿಧಿ ಕಾಯ್ದೆಯಡಿ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಾತ್ಮಕ ಕರ್ತವ್ಯ. ಈ ನಿಟ್ಟಿನಲ್ಲಿ ದೇಶಾದ್ಯಂತ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ನಡೆಯುತ್ತಿದೆ. 2025ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳಿಗೆ ಸಂಬಂಧಿಸಿದಂತೆ 2002ರಲ್ಲಿರುವ ಮತದಾರರ ಪಟ್ಟಿಯ ಮತದಾರರ ಕುಟುಂಬದ ಸಂತತಿಗಳಿಗೆ ವ್ಯಾಪಿಂಗ್ ವಾಡಿ ಲಿಂಕ್ ಮಾಡಲಾಗುತ್ತಿರುವುದರಿಂದ ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಗಮನಹರಿಸಬೇಕು.

— ಸ್ವರೂಪಾ ಟಿ.ಕೆ.ಜಿಲ್ಲಾಧಿಕಾರಿ