ಮೂಡುಬಿದಿರೆ ಶಿಕ್ಷಕರ ದಿನಾಚರಣೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮತ್ತಿತರರಿದ್ದರು.  
ಉಡುಪಿ

ಕಲಿಕೆಯಲ್ಲಿ ಹಿಂದುಳಿದವರಲ್ಲಿ ತುಂಬಬೇಕು ಆತ್ಮವಿಶ್ವಾಸ

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಡೆಗೂ ವಿಶೇಷ ಗಮನ ಹರಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ದ.ಕ. ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣೆ ಸಮಿತಿ, ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ ರಾವ್ ಕೆ. ದಿಕ್ಸೂಚಿ ಭಾಷಣ ಮಾಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳು, ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ ಪಡೆದ ಶಾಲೆಗಳನ್ನು ಗೌರವಿಸಲಾಯಿತು. ಶಿಕ್ಷಕರಿಗಾಗಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಿಗೆ ಪ್ರತಿಭಾ ಪುರಸ್ಕಾರ ನೀಡಿಲಾಯಿತು.
ಕಳೆದ ಬಾರಿಯ ಜಿಲ್ಲಾ ರಾಜ್ಯೋತ್ಸವ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ರತ್ನಾವತಿ ಕೆ., ಹರೀಶ್ ಕೆ.ಎಂ., ಉಷಾಲತಾ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ ನಿವೃತ್ತರಾದ 19 ಮಂದಿ ಶಿಕ್ಷಕರನ್ನು ಗೌರವಿಸಲಾಯಿತು.
ಮಾಜಿ ಸಚಿವ ಅಭಯಚಂದ್ರ ಜೈನ್, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉದ್ಯಮಿ ಕೆ. ಶ್ರೀಪತಿ ಭಟ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಶಿರೂರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಕಾಂತ ಜೈನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊರೆಸ್ವಾಮಿ, ಬಿಆರ್‌ಸಿ ಸಂಯೋಜಕಿ ಸೌಮ್ಯ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ ಅಂಬೂರಿ ಉಪಸ್ಥಿತರಿದ್ದರು. ವಿರೂಪಾಕ್ಷಪ್ಪ ಸ್ವಾಗತಿಸಿದರು. ನವೀನ ಅಂಬೂರಿ ನಿರ್ವಹಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ ವಂದಿಸಿದರು.