ಯುವವಾಹಿನಿ ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಘಟಕದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಯಿತು. ಗಣೇಶ್ ಸಾಯಿ ಕೊಡಾಜೆ, ಹರೀಶ್ ಬಾಕಿಲ ಮೊದಲಾದವರಿದ್ದರು.
ಬಂಟ್ವಾಳ: ಯುವವಾಹಿನಿ ಮಾಣಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ ನಡೆಯಿತು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ಆಧ್ಯಾ ಎಂ.ಎಸ್., ಗ್ರೀಷ್ಮಾ, ಪ್ರಗತಿ ಆರ್.ಸಾಲ್ಯಾನ್, ಹನ್ಶಿಕಾ ಎಸ್.ಡಿ. ಪೂಜಾರಿ, ಕೌಶಿಕ್, ದಿಶಾ ಕೆ.ಪೂಜಾರಿ, ದಿಶಾಂತ್ ಪೂಜಾರಿ ಹಾಗೂ ಪೂರ್ವಿ ಬಿ.ಕೆ. ಅವರನ್ನು ಅಭಿನಂದಿಸಲಾಯಿತು.
ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಕೊಡಾಜೆ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಬಾಕಿಲ, ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ ಪೂಜಾರಿ, ನೇರಳಕಟ್ಟೆ ರೈತ ಸೇವಾ ಸಂಘದ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸಂಜೀವ ಪೂಜಾರಿ, ವ್ಯಕ್ತಿತ್ವ ವಿಕಸನ ನಿರ್ದೇಶಕ ಸತೀಶ್ ಮುರುವ ಉಪಸ್ಥಿತರಿದ್ದರು.
ಅಮಿತಾ ಪೆರ್ನೆ ಸ್ವಾಗತಿಸಿದರು. ಯುವವಾಹಿನಿ ಮಾಣಿ ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ವಂದಿಸಿದರು. ಶುಭಾ ಪೆರ್ನೆ ಕಾರ್ಯಕ್ರಮ ನಿರೂಪಿಸಿದರು.