ಕುತ್ಯಾರು ನವೀನ್​ ಶೆಟ್ಟಿ  
ಉಡುಪಿ

ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಂಡರೆ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ

ಗೋಪಾಲಕೃಷ್ಣ ಪಾದೂರ್
ಉಡುಪಿ: ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಕೃಷ್ಣಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿರುವ ಜಿಲ್ಲಾಧಿಕಾರಿ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್​ ಮಾಡಿದ ಮನವಿಗೆ ಸ್ಪಂದಿಸಿದರೆ ಬಿಜೆಪಿಯಿಂದ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ಜಿಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಸದಾ ಹಿಂದೂ ವಿರೋಧಿ ನೀತಿಗಳ ಮೂಲಕ ಮತೀಯ ಶಕ್ತಿಗಳ ಓಲೈಕೆಗಾಗಿ ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರ ಇದುವರೆಗೆ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡುತ್ತಿದ್ದು, ಭಗವಾಧ್ವಜ ಹಾರಿಸಿದ ವಿಚಾರವನ್ನು ವಿವಾದವಾಗಿ ಸೃಷ್ಟಿಸಿ ಜಿಲ್ಲಾಧಿಕಾರಿಗಳನ್ನು ಟಾರ್ಗೆಟ್​ ಮಾಡುವ ಮೂಲಕ ಮತೀಯ ಶಕ್ತಿಗಳನ್ನು ಖುಷಿ ಪಡಿಸಲು ಮುಂದಾಗಿರುವುದು ದುರಂತ. ಕಳೆದ ಹಲವು ದಶಕಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಪರ್ಯಾಯೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯವಾಗಿದೆ. ಉಡುಪಿ ಜಿಲ್ಲೆಗೆ ಅತಿಥಿಯಂತೆ ಭೇಟಿ ನೀಡುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಿಲ್ಲ. ಅಲ್ಲದೆ ಪರ್ಯಾಯ ಮಹೋತ್ಸವದಿಂದ ಅಂತರ ಕಾಯ್ದುಕೊಂಡು ಉಡುಪಿ ಜಿಲ್ಲೆಯ ಸಮಸ್ತ ಜನತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಸ್ವತ@ ಆಗಮಿಸಿ ಪರ್ಯಾಯೋತ್ಸವದ ವೈಭವದ ಶೋಭಾಯಾತ್ರೆಗೆ ಭಗವಾಧ್ವಜವನ್ನು ಹಾರಿಸಿ ಚಾಲನೆ ನೀಡಿದ್ದರೆ ಕಾಂಗ್ರೆಸ್​ ಪಕ್ಷಕ್ಕೆ ಅವರ ರಾಜೀನಾಮೆಯನ್ನು ಕೇಳುವ ತಾಕತ್ತು ಇದೆಯೇ? ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸುವ ಮೂಲಕ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದ ಕಾಂಗ್ರೆಸ್​, ಜಿಲ್ಲಾಧಿಕಾರಿಗಳ ಮಾನಸಿಕ ಸ್ಥೆ$ರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಕಾಂಗ್ರೆಸ್​ ಪಕ್ಷಕ್ಕೆ ನೈತಿಕತೆ ಇದ್ದರೆ ಹಿಂದೂ ಧರ್ಮದ ಭಗವಾಧ್ವಜದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಹಾಗೂ ಕಾಂಗ್ರೆಸ್​ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪದಾಧಿಕಾರಿಗಳನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಕುತ್ಯಾರು ನವೀನ್​ ಶೆಟ್ಟಿ ಆಗ್ರಹಿಸಿದ್ದಾರೆ.