ಹೆಬ್ರಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಕಾರ್ಕಳ ಬಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಮೊದಲಾದವರಿದ್ದರು. 
ಉಡುಪಿ

ಜನಸಾಮಾನ್ಯರಿಂದ ಶೀಘ್ರ ಸರ್ಕಾರಕ್ಕೆ ಪಾಠ

ಇಂದಿರಾ ಎನ್ ಕೆ
ವಿಜಯವಾಣಿ ಸುದ್ದಿಜಾಲ ಹೆಬ್ರಿ
ಕೇಂದ್ರ ಸರ್ಕಾರವು ಗ್ಯಾಸ್, ಪೆಟ್ರೋಲ್ ದರ ಗರಿಷ್ಠ ಪ್ರಮಾಣದಲ್ಲಿ ಏರಿಕೆ ಮಾಡಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡಿದೆ. ನೀಟ್ ಪರೀಕ್ಷೆಯ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗಿ, ಆತ್ಮಹತ್ಯೆಗಳು ನಡೆದಿವೆ. ಶೀಘ್ರ ಜನರು ತಿರುಗಿ ಬಿದ್ದು ತಕ್ಕ ಪಾಠ ಕಲಿಸಲಿದ್ದಾರೆ. ಸಿದ್ದರಾಮಯ್ಯ ಸರ್ಕಾರ ನೀಡಿದ ಗ್ಯಾರಂಟಿ ಬಗ್ಗೆ ಅಪಹಾಸ್ಯ ಮಾಡಿದ ಬಿಜೆಪಿಗರು, ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನೀಡುತ್ತಾರೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಹೇಳಿದರು.
ಹೆಬ್ರಿಯಲ್ಲಿ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಕಾರ್ಕಳ ಬಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಬೆಲೆ ಏರಿಕೆಯ ಬಾದ್‌ಶಾ ಇದ್ದರೆ ಅದು ನರೇಂದ್ರ ಮೋದಿ. ಗ್ಯಾಸ್ ಬೆಲೆ ಇಷ್ಟು ದೊಡ್ಡಮಟ್ಟದಲ್ಲಿ ಏರಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಮೋದಿ ಜನಸಾಮಾನ್ಯರ ಧ್ವನಿಯಾಗದೆ, ಕೇವಲ ಉಳ್ಳವರ ಧ್ವನಿಯಾಗಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ್ ಭಟ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ನಲ್ಲೂರು, ಹೆಬ್ರಿ ಯುವ ಕಾಂಗ್ರೆಸ್ ಅಧ್ಯಕ್ಷ ಪರೀಕ್ಷಿತ್, ಪಕ್ಷದ ಪ್ರಮುಖರಾದ ಪ್ರವೀಣ್ ಬಲ್ಲಾಳ್, ಯಶೋದಾ ಶೆಟ್ಟಿ ಅಜೆಕಾರು, ದಿನೇಶ್ ಶೆಟ್ಟಿ, ಶಂಕರ್ ಶೇರಿಗಾರ್, ಸುನೀತಾ ಶೆಟ್ಟಿ, ಅಣ್ಣಪ್ಪ ಕುಲಾಲ್ ಮಂಡಾಡಿಜೆಡ್ಡು, ಜನಾರ್ದನ್ ಮೊದಲಾದವರಿದ್ದರು. ನಿತೀಶ್ ಎಸ್.ಪಿ. ಸ್ವಾಗತಿಸಿ, ನಿರೂಪಿಸಿದರು.