ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರವನ್ನು ಡಾ.ಲೋಕೇಶ ಉದ್ಘಾಟಿಸಿದರು. ಪ್ರಮುಖರಾದ ಪ್ರೊ.ರಾಮರಾಯ ಆಚಾರ್ಯ, ಪ್ರೊ.ನಾಗರಾಜ, ಪ್ರೊ.ನಾಗರಾಜ ವೈದ್ಯ ಎಂ., ಡಾ.ಶೇಖರ ಬಿ., ಕಾರ್ತಿಕ್ ಪೈ, ಉಜ್ವಲ ಶೆಟ್ಟಿ, ಸಾವಿತ್ರಿ, ಶಾಂತಿ ಉಪಸ್ಥಿತರಿದ್ದರು. 
ಉಡುಪಿ

ವ್ಯವಹಾರ ರಂಗದಲ್ಲಿ ನಿರಂತರ ಬದಲಾವಣೆ

ಕುಂದಾಪುರ: ವ್ಯವಹಾರ ರಂಗದಲ್ಲಿ ಬದಲಾವಣೆಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಯಾವುದೇ ಹೊಸ ವ್ಯವಹಾರ ಮಾದರಿ ಅನ್ವೇಷಣೆ ಹಾಗೂ ಚಾಲ್ತಿಯಲ್ಲಿರುವ ಮಾದರಿಗಳಲ್ಲಿನ ಬದಲಾವಣೆಗಳು ಹಲವಾರು ಸವಾಲುಗಳನ್ನು ಸೃಷ್ಟಿಸುತ್ತವೆ ಹಾಗೂ ಹೊಸ ಅವಕಾಶಗಳನ್ನು ನೀಡುತ್ತವೆ. ಉದ್ಯಮ ರಂಗದ ಮಾದರಿಗಳಲ್ಲಾಗುವ ವ್ಯತ್ಯಾಸ ಉದ್ದಿಮೆದಾರರ, ಉದ್ಯೋಗಿಗಳ, ಗ್ರಾಹಕರ ಹಾಗೂ ಉದ್ಯೋಗ ಆಕಾಂಕ್ಷಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ ಎಂದು ಹಳೆಯಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಲೋಕೇಶ ಹೇಳಿದರು.
ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಆಶ್ರಯದಲ್ಲಿ ವ್ಯವಹಾರ ಕ್ಷೇತ್ರದ ಹೊಸ ಮಾದರಿಗಳು ಎಂಬ ವಿಷಯದ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಪ್ರೊ.ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ನಾಗರಾಜ ಯು., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ ಬಿ., ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಪೈ, ಉಪನ್ಯಾಸಕರಾದ ಉಜ್ವಲ ಶೆಟ್ಟಿ, ಸಾವಿತ್ರಿ, ಶಾಂತಿ ಉಪಸ್ಥಿತರಿದ್ದರು. ಪೂಜಾ ಸ್ವಾಗತಿಸಿದರು. ಕಾಲೇಜಿನ ಸ್ನಾತಕೋತ್ತರ ವಿಭಾಗ ಸಂಚಾಲಕ ಡಾ.ಉದಯ ಶೆಟ್ಟಿ ಕೆ. ಪ್ರಾಸ್ತಾವಿಕ ಮಾತನಾಡಿದರು. ಅಮೃತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರತಿಮಾ ವಂದಿಸಿದರು.